ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದೀಕ್ಷಾ ಸಮಾರಂಭ

Advertisement

ಸವಣೂರು : ಶಿಕ್ಷಣವು ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಮತ್ತು ದೇಶಭಕ್ತಿಯನ್ನು ತುಂಬಿಸಬೇಕು.ಅಂತಹ ಪರಿಪೂರ್ಣ ಶಿಕ್ಷಣ ಇಂದಿನ ಅಗತ್ಯ,ನರಿಮೊಗರು ಸರಸ್ವತಿ ವಿದ್ಯಾಮಂದಿರದಲ್ಲಿ ಇಂತಹ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯುತ್ತಿದೆ ಎಂದು ಹಿರಿಯ ಕೃಷಿಕ ಶ್ರೀಧರ ಕೆದಿಲಾಯ ಪುದ್ಕೋಳಿ ಹೇಳಿದರು.

Advertisement

ಅವರು ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದ ಆಂಗ್ಲಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶೈಕ್ಷಣಿಕ ವರ್ಷಾರಂಭ ಹಾಗೂ ನೂತನ ವಿದ್ಯಾರ್ಥಿಗಳ ದೀಕ್ಷಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಅತಿಥಿಯಾಗಿ ಪಾಲ್ಗೊಂಡ ಎಂಜಿನಿಯರ್ ವಿಶ್ವನಾಥ ಬಲ್ಯಾಯ ಮುಂಡೋಡಿ ಅವರು ಮಾತನಾಡಿ,ವಿದ್ಯಾರ್ಥಿಗಳಿಗೆ ಎಳವೆಯಲ್ಲೇ ಸಂಸ್ಕಾರಯುತ ಶಿಕ್ಷಣ ದೊರಕಿದರೆ ಭವಿಷ್ಯದಲ್ಲಿ ಉತ್ತಮ ನಾಗರೀಕನಾಗಿ ರೂಪುಗೊಳ್ಳಲು ಸಾಧ್ಯ ಎಂದರು.
ಶಾಲಾ ಆಡಳಿತಾ„ಕಾರಿ ಶುಭಾ ಉಪಸ್ಥಿತರಿದ್ದರು.
ಹಿರಿಯ ವಿದ್ಯಾರ್ಥಿಗಳು ನೂತನ ವಿದ್ಯಾರ್ಥಿಗಳಿಗೆ ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಿದರು.
ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಸ್ತಾವನೆಗೈದರು.ಶಾಲಾ ಮುಖ್ಯಗುರು ರಾಜರಾಮ ವರ್ಮ ವಿಟ್ಲ ಸ್ವಾಗತಿಸಿದರು.ಶಿಕ್ಷಕಿ ರೇಷ್ಮಾ ವಂದಿಸಿದರು.ಶಿಕ್ಷಕಿ ಶೈಲಜಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಪುರುಷರಕಟ್ಟೆ : ಸರಸ್ವತಿ ವಿದ್ಯಾಮಂದಿರದಲ್ಲಿ ದೀಕ್ಷಾ ಸಮಾರಂಭ"

Leave a comment

Your email address will not be published.


*