ಕಡಬ: ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಬ-ಸುಬ್ರಹ್ಮಣ್ಯ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯ ಪರಂಬೋಕು ಪ್ರದೇಶವನ್ನು ಪಹಣಿ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿ ಸರಕಾರಿ ಜಮೀನು ಎಂದು ನಮೂದಿಸಿ ಅತಿಕ್ರಮಣ ಮಾಡಲು ಹುನ್ನಾರ ನಡೆಯುತ್ತಿದೆ ಎಂದು ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ ಕಂದಾಯ ಇಲಾಖೆಗೆ ದೂರು ಸಲ್ಲಿಸಿದ ದೂರಿನ ಸ್ಪಂದಿಸಿರುವ ಕಂದಾಯ ಅಧಿಕಾರಿಗಳು ಕೊನೆಗೂ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದ್ದಾರೆ.
ಕುಟ್ರುಪ್ಪಾಡಿ ಗ್ರಾಮದ ಸರ್ವೆ ನಂ. 40ರಲ್ಲಿ ಇರುವ ಹಳೆಸ್ಟೇಶನ್‍ನ ಪೊಟ್ಟುಕೆರೆಯನ್ನು ಉದ್ಯೋಗ ಖಾತರಿ ಯೋಜನೆಯಡಿ ಹೂಳೆತ್ತಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಮಾಹಿತಿ ಪಡೆದಾಗ ಈ ಹಿಂದೆ ಕೈಬರಹದ ಪಹಣಿ ಪತ್ರದಲ್ಲಿ ಕೆರೆ ಪರಂಬೋಕು ಎಂದು ಇರುವ ಜಾಗವನ್ನು ಇದೀಗ ಸರಕಾರಿ ಜಾಗ ಎಂದು ದಾಖಲಿಸಲಾಗಿರುವ ವಿಚಾರ ಬೆಳಕಿಗೆ ಬಂದಿತ್ತು. ಈ ಅಕ್ರಮ ತಿದ್ದುಪಡಿಯ ಹಿಂದೆ ಕೆರೆಯನ್ನು ಆತಿಕ್ರಮಣಗೊಳಿಸುವ ಹುನ್ನಾರ ಇರುವುದನ್ನು ಮನಗಂಡು ಅಕ್ರಮ ತಿದ್ದುಪಡಿಯನ್ನು ಸರಿಪಡಿಸಿ ಸದ್ರಿ ಪ್ರದೇಶವನ್ನು ಮತ್ತೆ ಕೆರೆ ಪರಂಬೋಕು ಎಂದು ಪಹಣಿಯಲ್ಲಿ ದಾಖಲಿಸಬೇಕು ಎಂದು ಪಂಚಾಯತ್ ವತಿಯಿಂದ ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿ, ಸಹಾಯಕ ಕಮೀಶನರ್ ಹಾಗೂ ಕಡಬ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಕಂದಾಯ ಇಲಾಖೆ ಪಹಣಿ ಪತ್ರದಲ್ಲಿನ ತಪ್ಪನ್ನು ಸರಿಪಡಿಸಿದೆ.
ಹಳೆಯ ಕಡತಗಳಲ್ಲಿ ಹಾಗೂ ಪಹಣಿಪತ್ರಗಳಲ್ಲಿ ಕೆರೆ ಪರಂಬೋಕು ಎಂದೇ ದಾಖಲಿಸಲ್ಪಟ್ಟಿರುವ ಸದ್ರಿ ಭೂಮಿಯನ್ನು ಕೆಲವು ವರ್ಷಗಳ ಹಿಂದೆ ಏಕಾಏಕಿ ಸರಕಾರಿ ಜಮೀನು ಎಂದು ಪಹಣಿಯಲ್ಲಿ ದಾಖಲಿಸಿರುವುದರ ಹಿಂದೆ ಕೆರೆಯನ್ನು ಕಬಳಿಸುವ ಉದ್ದೇಶ ಇದೆ ಎನ್ನುವುದು ಸ್ಥಳೀಯರ ಆರೋಪಿಸಿದ್ದರು. ಯಾರಿಗೋ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೆರೆಯ ಜಮೀನನ್ನು ಸರಕಾರಿ ಎಂದು ನಮೂದಿಸಲಾಗಿದೆ. ಈಗಾಗಲೇ ಕರೆಯ ಒಂದು ಭಾಗದಲ್ಲಿ ಕಲ್ಲು ಮಣ್ಣು ತುಂಬಿರುವುದರಿಂದ ಕೆರೆಯ ಗಾತ್ರ ಸಾಕಷ್ಟು ಕಿರಿದಾಗಿದೆ. ಕೆರೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕೆಂದು ಆದೇಶ ಹೊರಡಿಸಿರುವ ಸರಕಾರ ಸದ್ರಿ ಕೆರೆಯ ಅತಿಕ್ರಮಣದ ಸಂಚನ್ನು ವಿಫಲಗೊಳಿಸಿ ಗ್ರಾಮಸ್ಥರಿಗೆ ಕೆರೆಯನ್ನು ಉಳಿಸಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಪೊಟ್ಟುಕೆರೆ ಅತಿಕ್ರಮಣ ಹುನ್ನಾರಕ್ಕೆ ತಡೆ : ತಪ್ಪು ಸರಿಪಡಿಸಿದ ಕಂದಾಯ ಅಧಿಕಾರಿಗಳು"