ಪೌರತ್ವ ಕಾಯಿದೆ : ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗಲಭೆ : ಇಬ್ಬರು ಬಲಿ : ಕರ್ಫ್ಯೂ ಜಾರಿ

December 19, 2019
9:17 PM

ಮಂಗಳೂರು: ಪೌರತ್ವ ಕಾಯಿದೆ ಹಾಗೂ ಎನ್ ಸಿ ಆರ್ ವಿರುದ್ಧ ಮಂಗಳೂರಿನಲ್ಲಿ  ಸೆಕ್ಷನ್ ಜಾರಿ ನಡುವೆಯೇ ನಡೆದ ಪ್ರತಿಭಟನೆಯಲ್ಲಿ 6 ಮಂದಿ ಗಾಯಗೊಂಡು ಇಬ್ಬರು ಮೃತಪಟ್ಟಿದ್ದಾರೆ.ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ.

ಸೆಕ್ಷನ್ ನಡುವೆಯೂ ಪ್ರತಿಭಟನೆ ನಡೆದಿತ್ತು.  ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತು, ತಕ್ಷಣವೇ ಪೊಲೀಸರು ಹಿಂಸಾಚಾರ  ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಟ್ಟರು. ಆದರೆ ಮುಖಕ್ಕೆ ಬಟ್ಟೆಕಟ್ಟಿಕೊಂಡು ಹಲವಾರು ಮಂದಿ ಪೊಲೀಸರಿಗೆ ಕಲ್ಲು ಎಸೆದು ಗಾಯವಾಯಿತು. ತಕ್ಷಣವೇ ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗಲಭೆ ನಿಯಂತ್ರಣಕ್ಕೆ ತರಲು ಪ್ರಯತ್ನಿಸಿದರು.

ಪ್ರತಿಭಟನಾಕಾರರು  ರಸ್ತೆಯಲ್ಲಿ ಬೆಂಕಿ ಹಚ್ಚಿ ಪ್ರತಿಭಟಿಸಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ್ದರಿಂದ ಗಾಳಿಯಲ್ಲಿ ಗುಂಡು ಸಿಡಿಸಿದ್ದಾರೆ. ಪ್ರತಿಭಟನಾಕಾರರು ಕಟ್ಟಡದಲ್ಲಿ ಸೇರಿಕೊಂಡಿದ್ದು, ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಧರಣಿ ವೇಳೆ 40 ಕ್ಕೂ ಹೆಚ್ಚು ಪೊಲೀಸರಿಗೆ ಹಾಗೂ  ಪ್ರತಿಭಟನಾಕಾರರಿಗೆ ಗಾಯಗಳಾಗಿವೆ. ಈ ಸಂದರ್ಭ ಗಾಯಗೊಂಡ  ಬೆಂಗ್ರೆ ನಿವಾಸಿ 23 ವರ್ಷದ ನೌಶೀನ್ ಮತ್ತು 49 ವರ್ಷದ ಜಲೀಲ್ ಎಂಬುವರು ಮೃತಪಟ್ಟಿದ್ದಾರೆ.

ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಮಂಗಳೂರಿನಲ್ಲಿ ನಾಳೆ ಮಧ್ಯ ರಾತ್ರಿವರೆಗೂ ಕರ್ಫ್ಯೂ ಜಾರಿ ಮಾಡಿ ಪೊಲೀಸ್ ಆಯುಕ್ತ ಡಾ. ಪಿ.ಎಸ್. ಹರ್ಷ ಆದೇಶಿಸಿದ್ದಾರೆ.  ನೂರು ಮಂದಿ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆತಂದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದ್ದು, ಮಂಗಳೂರಿನಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಚ್ ಮಾಡಿದ್ದು, ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror