ಪ್ರವಾಹದಲ್ಲಿ ಪತ್ರಕರ್ತನ ಮನೆಗೆ ಹಾನಿ :ಪರಿಹಾರಕ್ಕೆ ಕಾರ್ಯನಿರತ ಪತ್ರಕರ್ತರದಿಂದ ಡಿಸಿ ಗೆ ಮನವಿ

August 16, 2019
3:02 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಟಿವಿ 9 ವಾಹಿನಿಯ ವೀಡಿಯೊ ಜರ್ನಲಿಸ್ಟ್ ರಾಜೇಶ್ ಅವರ ಮನೆಗೆ ಪ್ರವಾಹದಲ್ಲಿ ತೀವ್ರ ಹಾನಿ ಉಂಟಾಗಿದ್ದು  ಪರಿಹಾರ ನೀಡುವಂತೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಬೆಳ್ತಂಗಡಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿ ರಾಜೇಶ್ ಅವರ ಕಿಲ್ಲೂರಿನ ಮನೆಗೆ ತೀವ್ರ ಹಾನಿ ಉಂಟಾಗಿತ್ತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು 5 ಲಕ್ಷ ರೂಪಾಯಿ ಪರಿಹಾರದ ಭರವಸೆ ನೀಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿಗಳಿಗೆ ಅಭಿನಂದನೆ:

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿ ಹಗಲು ರಾತ್ರಿ ಎನ್ನದೆ ನೆರೆ ಸಂತ್ರಸ್ತರ ಸಂಕಷ್ಟಗಳಿಗೆ ಸ್ಪಂದಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು .

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಬಾರಿ ಮಳೆಗಾಲಕ್ಕೆ ಮುನ್ನವೇ ಪ್ರಾಕೃತಿಕ ವಿಕೋಪದಿಂದ ಎದುರಾಗಬಹುದಾದ ಸಮಸ್ಯೆಗಳ ಅಪಾಯದ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು . ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಜೂನ್ ತಿಂಗಳಿನಲ್ಲಿ ಮಂಗಳೂರಿಗೆ ಆಗಮಿಸಿತ್ತು . 10 ಬೋಟ್ ಗಳನ್ನೂ ಕೂಡಾ ಸಿದ್ಧಪಡಿಸಲಾಗಿತ್ತು . ಹೀಗಾಗಿ ಭಾರಿ ಪ್ರಮಾಣದ ನೆರೆ ಬಂದರೂ ಹೆಚ್ಚಿನ ಸಾವು ನೋವುಗಳು ಆಗದಂತೆ ಕ್ರಮ ಕೈಗೊಳ್ಳಲು ಸಹಾಯಕವಾಯಿತು ಎಂದು ಹೇಳಿದರು.ಡೆಂಘೆ ಜ್ವರ ಸೇರಿದಂತೆ ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸುವ ಕೆಲಸ ಇನ್ನೂ ಆಗಬೇಕಾಗಿದೆ .ತಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆಯೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?
July 17, 2025
6:27 AM
by: ಮಹೇಶ್ ಪುಚ್ಚಪ್ಪಾಡಿ
ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ
July 17, 2025
5:48 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group