ಫೆ.23 ರಂದು ಇನ್ನರ್ ವ್ಹೀಲ್ ಕ್ಲಬ್ ರಜತ ಸಂಭ್ರಮ

February 18, 2020
10:21 PM

ಸುಳ್ಯ: ಸುಳ್ಯ ರೋಟರಿ ಕ್ಲಬ್ ನ ಸಹ ಸಂಸ್ಥೆಯಾದ ಇನ್ನರ್ ವ್ಹೀಲ್ ಕ್ಲಬ್ ನ ಬೆಳ್ಳಿ ಹಬ್ಬ ಆಚರಣೆ ಫೆ‌23 ರಂದು ರಥಬೀದಿಯಲ್ಲಿರುವ ರೋಟರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಇನ್ನರ್ ವ್ಹೀಲ್ ಕ್ಲಬ್ ರಜತ ವರ್ಷಾಚರಣೆ ಸಮಿತಿಯ ಅಧ್ಯಕ್ಷೆ ಶಶಿಕಲಾ ಹರಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಪೊಲೀಸ್ ಟ್ರೈನಿಂಗ್ ಸ್ಕೂಲ್ ನ ಪ್ರಾಂಶುಪಾಲೆ ಧರಣೀದೇವಿ ಮಾಲಗತ್ತಿ ಮುಖ್ಯ ಅತಿಥಿಯಾಗುವರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಇನ್ನರ್ ವ್ಹೀಲ್ ಜಿಲ್ಲಾಧ್ಯಕ್ಷೆ ಅನುರಾಧಾ ನಂದಕುಮಾರ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ.ಪುರುಷೋತ್ತಮ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ರಜತ ವರ್ಷಾಚರಣೆಯ ಪ್ರಯುಕ್ತ ರಥಬೀದಿಯ ರೋಟರಿ ಶಾಲೆಯ ಸಮೀಪ ನಿರ್ಮಿಸಲಾಗಿರುವ ಬಸ್ ತಂಗುದಾಣವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಉದ್ಘಾಟಿಸುವರು. ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಯಾಗುವರು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ಡಾ.ಹರ್ಷಿತಾ ಪುರುಷೋತ್ತಮ, ಕಾರ್ಯದರ್ಶಿ ಜಯಾಮಣಿ ಮಾಧವ, ಸುಮಂಗಲಾ ರವಿರಾಜ್, ಮೀನಾಕ್ಷಿ ಹೇಮನಾಥ್, ಮಮತಾ ಮುಕುಂದ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror