ಫೆ.8 : ಪುತ್ತೂರಿನಲ್ಲಿ ಭಜನಾ ಸತ್ಸಂಗ ಸಮಾವೇಶ – 2020

February 6, 2020
12:27 PM

ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಸತ್ಸಂಗ ಸಮಿತಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಪುತ್ತೂರು ಇದರ ವತಿಯಿಂದ ಭಜನಾ ಸತ್ಸಂಗ ಸಮಾವೇಶ – 2020, ಸಾಮೂಹಿಕ ಕೋಟಿ ಶಿವ ಪಂಚಾಕ್ಷರಿ ಪಠಣ, ಭಜನಾ ಸಂಕೀರ್ತನಾ ಮೆರವಣಿಗೆಯು ಫೆ. 8 ರಂದು ಪುತ್ತೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ನಡೆಯಲಿರುವುದು ಎಂದು ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ ತಿಳಿಸಿದರು.

Advertisement
Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 8.30ರಿಂದ 9.30ರ ತನಕ ನೋಂದಾವಣೆ ನಡೆಯಲಿದ್ದು, 9.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವುದು. ಮಾಣಿಲ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜರೇಖರಾನಂದ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಬೆಳಿಗ್ಗೆ 10ರಿಂದ ಸಾಮೂಹಿಕ ಭಜನೆ, ಕುಣಿತ ಭಜನೆ ಪ್ರಾತ್ಯಕ್ಷಿತೆ ನಡೆಯಲಿರುವುದು. ಬೆಳಿಗ್ಗೆ 11 ಗಂಟೆಯಿಂದ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಪದಗ್ರಹಣ ಗ್ರಾಮ ವಿಕಾಸ ಕಾರ್ಯಕ್ರಮ ನಡೆಯಲಿರುವುದು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿರುವರು. ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಪುತ್ತೂರು ಶಾಸಕ ಸಂಜೀವ ಮಠಂದೂರು ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡುವರು. ಶ್ರೀ ಕ್ಷೇ.ಧ.ಗ್ರಾ.ಯೋ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್. ಮಂಜುನಾಥ್ ಶುಭಾಶಂಸನೆಗೈಯುವರು.

Advertisement

ಸಂಜೆ ಗಂಟೆ 4 ರಿಂದ ಸಾಮೂಹಿಕ ಕೋಟಿ ಶಿವಪಂಚಾಕ್ಷರಿ ಜಪಯಜ್ಞ, ಸಂಜೆ 4.30ರಿಂದ ಭಜನೋತ್ಸವ, 5.30ರಿಂದ ಭಜನಾ ಸತ್ಸಂಗ ಸಮಾವೇಶ ನಡೆಯಲಿರುವುದು. ಡಾ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಧರ್ಮಸ್ಥಳ ಕ್ಷೇತ್ರದ ಹೇಮಾವತಿ ವಿ. ಹೆಗ್ಗಡೆ, ಸಂಸದ ನಳಿನ್‌ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಕಾರ್ಯನಿರ್ವಹಣಾಧಿಕಾರಿ ನವೀನ್‌ಕುಮಾರ್ ಭಂಡಾರಿ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 6.30ರಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ವಿದ್ಯಾರ್ಥಿಗಳಿಂದ ಎಸ್‌ಡಿಎಂ ಕಲಾ ವೈಭವ ಕಾರ್ಯಕ್ರಮ ನಡೆಯಲಿರುವುದು ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಭಜನಾ ಪರಿಷತ್‌ನ ಕಾರ್ಯದರ್ಶಿ ಯತೀಶ್ ರೈ ದುಗಲಡ್ಕ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಸಂತೋಷ್‌ಕುಮಾರ್ ರೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧರ್ಮಸ್ಥಳ ಯಕ್ಷಗಾನ ಮೇಳ |  ಸೇವೆ ಬಯಲಾಟ ಪ್ರದರ್ಶನ
November 21, 2024
6:59 PM
by: The Rural Mirror ಸುದ್ದಿಜಾಲ
ಮಂಗಳೂರಿನಲ್ಲಿ ಬಹುಸಂಸ್ಕೃತಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿದ  ಸಚಿವ  ದಿನೇಶ್ ಗೂಂಡೂರಾವ್
November 17, 2024
11:23 AM
by: The Rural Mirror ಸುದ್ದಿಜಾಲ
ವಿದುಷಿ ಶಂಕರಿಮೂರ್ತಿ ಅವರಿಗೆ ಶ್ರೀ ಕಲಾಜ್ಯೋತಿ ಪ್ರಶಸ್ತಿ ಪ್ರದಾನ
November 11, 2024
8:02 PM
by: The Rural Mirror ಸುದ್ದಿಜಾಲ
ವಿದುಷಿ ಶಂಕರಿ ಮೂರ್ತಿ ಅವರಿಗೆ ಶ್ರೀ ಕಲಾಜ್ಯೋತಿ ಪ್ರಶಸ್ತಿ
November 8, 2024
6:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror