ಭುವನೇಶ್ವರ : ಫೋನಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಒಡಿಸ್ಸಾದಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರದಿಂದ 1000 ಕೋಟಿ ರೂಪಾಯಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ 381 ಕೋಟಿ ರೂಪಾಯಿ ಪರಿಹಾರವನ್ನು ಕೇಂದ್ರ ಸರಕಾರದಿಂದ ಘೋಷಿಸಿದ್ದ ಪ್ರಧಾನಿ ಸೋಮವಾರ ಹೆಚ್ಚುವರಿಯಾಗಿ ಪರಿಹಾರ ಧನ ಘೋಷಿಸಿದ್ದಾರೆ. ಇದರ ಜೊತೆಗೆ ಜನರ ಆರೋಗ್ಯ ಸುಧಾರಣೆಗೂ ಪರಿಹಾರ ನೀಡುವುದಾಗಿ ಇದೇ ವೇಳೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರ ಜಂಟಿಯಾಗಿ ಪರಿಹಾರ ಕಾರ್ಯ ನಡೆಸಲಿದ್ದು, ಕೇಂದ್ರ ಸರಕಾರದಿಂದ ಒಂದು ತಂಡ ರಾಜ್ಯಗಳಲ್ಲಿ ಪರಿಹಾರ ಕಾರ್ಯಗಳಿಗಾಗಿ ಕೆಲಸ ಮಾಡಲಿದೆ ಎಂದು ಇದೇ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಫೋನಿ ಚಂಡಮಾರುತ : ಪರಿಹಾರ ಕಾರ್ಯಕ್ಕೆ 1000 ಕೋಟಿ ಘೋಷಿಸಿದ ಪ್ರಧಾನಿ"