ಬಜರಂಗದಳ ಮಾಜಿ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ನಿಧನ

April 25, 2020
7:41 AM

ಬೆಂಗಳೂರು:  ಬಜರಂಗದಳ ಮಾಜಿ ಸಂಚಾಲಕ,  ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ (48)  ಶನಿವಾರ ಮುಂಜಾನೆ ಹೃದಯಾಘಾತದಿಂದ ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಮೂಲತ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದ ಅವರು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಅವರು  ವಿವಿಧ ಹೋರಾಟಗಳಲ್ಲಿ, ಹಿಂದೂಪರವಾದ ಧರಣಿ, ಹೋರಾಟಗಳಲ್ಲಿ ಸಕ್ರಿಯವಾಗಿದ್ದರು. 2008 ರಲ್ಲಿ ಕ್ರೈಸ್ತ ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸಿದ ಸಂಬಂಧ ಬಂಧನಕ್ಕೊಳಗಾಗಿದ್ದರು. ಅದಾದ ನಂತರ 2008 ರಲ್ಲಿ ಸಂಘಪರಿವಾರದಿಂದ ಹೊರಬಂದಿದ್ದರು. ಬಳಿಕ 2011 ರಲ್ಲಿ ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದರು.  ವಿವಿಧ ಹೋರಾಟಗಳಲ್ಲಿ  ಮುಂಚೂಣಿಯಲ್ಲಿದ್ದು ಈಚೆಗೆ ಸಿ ಎ ಎ ವಿರುದ್ಧದ ಹೋರಾಟಗಳಲ್ಲಿ  ಸಕ್ರಿಯವಾಗಿದ್ದರು.

ಚಿಕ್ಕಮಗಳೂರಿನ ಕೊಪ್ಪದಲ್ಲಿ ಅವರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಿರಿಯ ಕಲಾವಿದ ರಂಗಮನೆಯ ಸುಜನಾ ಸುಳ್ಯ ಇನ್ನಿಲ್ಲ
October 24, 2025
7:32 AM
by: The Rural Mirror ಸುದ್ದಿಜಾಲ
ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ
August 28, 2025
9:07 PM
by: The Rural Mirror ಸುದ್ದಿಜಾಲ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ |
October 21, 2024
10:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror