ಸುಬ್ರಹ್ಮಣ್ಯ: ಬದುಕಿನಲ್ಲಿ ಆಧ್ಯಾತ್ಮಿಕ ವಿಚಾರಧಾರೆಗಳನ್ನು ಅಳವಡಿಸಿಕೊಂಡರೆ ಸುಸಂಸ್ಕೃ ತ ಜೀವನ ಪ್ರಾಪ್ತವಾಗುತ್ತದೆ. ಹಿರಿಯರು ಹಾಕಿಕೊಟ್ಟ ತಳಹದಿಯಲ್ಲಿ ನಾವು ನಡೆದರೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ ಹೇಳಿದರು.
ಅವರು ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಳದಲ್ಲಿ ನಡೆದ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದರು. ಉಪನಿಷತ್ ಮೊದಲಾದ ಗ್ರಂಥಗಳನ್ನು ಎಲ್ಲರಿಗೂ ಅಧ್ಯಯನ ಮಾಡಲು ಸಾಧ್ಯವಾಗದಿದ್ದರೂ ಅವುಗಳ ಸಾರವನ್ನು ಅಳವಡಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿದರೆ ಸುಗಮ ಜೀವನ ಸಾಧ್ಯ ಎಂದರು.
ಬಸವೇಶ್ವರ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂಧ ಸಭಾಧ್ಯಕ್ಷತೆ ವಹಿಸಿದ್ದರು. ವಿದ್ಯಾಸಾಗರ ಕಲಾ ಶಾಲೆಯ ಅಧ್ಯಕ್ಷ ಎಂ.ಹರೀಶ್ ಕಾಮತ್, ಬಸವೇಶ್ವರ ದೇವಳದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಕೆ.ಮನೋಹರ ನಾಳ, ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ ಕೃಷ್ಣ ದೀಕ್ಷಿತ್, ರಾಜ್ಯ ಸಂಪನ್ಮೂಲ ವ್ಯಕ್ತಿ ಪ್ರಕಾಶ್ ಮೂಡೆತ್ತಾಯ ಮುಖ್ಯಅತಿಥಿಗಳಾಗಿದ್ದರು. ಶಿಬಿರದ ಸಂಚಾಲಕ ಎಂ.ಕೃಷ್ಣ.ಭಟ್, ಕಾರ್ಯದರ್ಶಿ ಸತ್ಯಶಂಕರ ಭಟ್, ಪ್ರಭಾಕರ ಪಡ್ರೆ ಉಪಸ್ಥಿತರಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಸವನಮೂಲೆ ದೇವಳದಲ್ಲಿ ಉಚಿತ ಸಂಸ್ಕಾರ ಶಿಬಿರ"