ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು

October 19, 2019
5:44 PM

ಸುಳ್ಯ:ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ನಗರದ ಹಳೆಗೇಟು ಸಮೀಪ ಶನಿವಾರ ಸಂಜೆ ನಡೆದಿದೆ. ಹಳೆಗೇಟು ವಿದ್ಯಾನಗರದ ನಿವೃತ್ತ ಶಿಕ್ಷಕ ಹರಿಪ್ರಸಾದ್ ಅವರ ಪತ್ನಿ ನಿವೃತ್ತ ಶಿಕ್ಷಕಿ ಮೀನಾಕ್ಷಿ.ಕೆ‌.ಎ(66) ಮೃತಪಟ್ಟವರು.

Advertisement

ಹರಿಪ್ರಸಾದ್ ಮತ್ತು ಮೀನಾಕ್ಷಿ ಅವರು ಮುಖ್ಯ ರಸ್ತೆಯಲ್ಲಿ ರಿಕ್ಷಾ ಇಳಿದು ರಸ್ತೆ ದಾಟುತ್ತಿದ್ದ ಸಂದರ್ಭ ಸುಬ್ರಹ್ಮಣ್ಯದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಮೀನಾಕ್ಷಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಂಡೆಕೋಲಿನಲ್ಲಿ ಸಂಧಿಕರ ಮನೆಯಲ್ಲಿ ಪೂಜೆಗೆ ಹೋಗಿ ಹಿಂತಿರುಗಿ ಬಂದು ರಿಕ್ಷಾ ಇಳಿದು ಮನೆಗೆ ಹೋಗುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ. ಹರಿಪ್ರಸಾದ್ ರಸ್ತೆ ದಾಟಿದ್ದರು. ಹಿಂದಿನಿಂದ ರಸ್ತೆ ದಾಟುತ್ತಿದ್ದ ಮೀನಾಕ್ಷಿ ಅವರಿಗೆ ಬಸ್ ಡಿಕ್ಕಿ ಹೊಡೆದಿದೆ. ಶಾಂತಿನಗರ, ಕೊಯಿಕುಳಿ‌, ಅಯ್ಯನಕಟ್ಟೆ ಸೇರಿ ಹಲವು ಕಡೆ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಮೀನಾಕ್ಷಿ ಅವರು ಆರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಪತಿ, ಮಕ್ಕಳಾದ ಶೋಭಾ, ಶ್ರೀರಂಜನಿ, ಗುರುರಾಜ್ ಅವರನ್ನು ಅಗಲಿದ್ದಾರೆ

ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸುಳ್ಯ ಪೊಲೀಸರು ಪ್ರಕರಣ  ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group