ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣ: ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ ಡಿ.18ರಿಂದ ಸಂಚಾರ ನಿಷೇಧ

December 11, 2019
9:51 PM

ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ‌.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಸುವ ಸಲುವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ ಡಿ.18ರಿಂದ 2020 ಮಾರ್ಚ್ 31ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ.

Advertisement
Advertisement

ಇಲ್ಲಿನ ಹಳೆಯ ಸೇತುವೆಯನ್ನು ಕೆಡವಿ 10 ಮೀಟರ್ ಅಗಲದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತಿದ್ದು ಸೇತುವೆಯ ಎರಡೂ ಬದಿಯಲ್ಲಿ ತೆಂಗು, ಅಡಿಕೆ ತೋಟವಿರುವ ಕಾರಣ ಬದಲಿ ರಸ್ತೆ ನಿರ್ಮಿಸಲು ಅವಕಾಶ ಇರುವುದಿಲ್ಲ. ಈ ಹಿನ್ನಲೆಯಲ್ಲಿ ರಸ್ತೆಯಲ್ಲಿ ಸುಮಾರು ಮೂರೂವರೆ ತಿಂಗಳ ಕಾಲ ಈ ಭಾಗದ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ ಅನುದಾನ ಬಿಡುಗಡೆಗೊಂಡಿದೆ.

 

ಸಂಚಾರಕ್ಕೆ ಬದಲಿ ರಸ್ತೆ: ಸುಳ್ಯ-ಬಂದಡ್ಕ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆಗಳನ್ನು ಸೂಚಿಸಲಾಗಿದೆ. ಬಂದಡ್ಕದಿಂದ ಸುಳ್ಯಕ್ಕೆ ಬರುವ ವಾಹನಗಳು ಕೊಲ್ಲರಮೂಲೆ-ಕರ್ಲಪ್ಪಾಡಿ ದ್ವಾರ-ಕಾಂತಮಂಗಲ ಸೇತುವೆ ಮೂಲಕ ಹಾಗು ಸುಳ್ಯದಿಂದ ಬಂದಡ್ಕಕ್ಕೆ ಹೋಗುವ ವಾಹನಗಳು ಕಾಂತಮಂಗಲ ಸೇತುವೆ-ಕರ್ಲಪ್ಪಾಡಿ ದ್ವಾರ-ಕೊಲ್ಲರಮೂಲೆ ಮೂಲಕ ಸಂಚರಿಸಬಹುದು ಎಂದು ಸುಳ್ಯ ಲೋಕೋಪಯೋಗಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror