ಬಾಳಿಲ : ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಬಾಳಿಲ ಗ್ರಾ.ಪಂ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಎಂ ಅಧ್ಯಕ್ಷತೆ ವಹಿಸಿದರು. ತಾ.ಪಂ ಸದಸ್ಯೆ ಜಾಹ್ನವಿ ಕಾಂಚೋಡು, ಬಾಳಿಲ ಗ್ರಾ.ಪಂ ಸದಸ್ಯ ರಾಧಾಕೃಷ್ಣರಾವ್ ಉಡುವೆಕೋಡಿ, ಪಿ.ಟಿ.ಎ ಅಧ್ಯಕ್ಷ ಶಿವರಾಮ ಬಿ ಕಲ್ಮಡ್ಕ, ಆಡಳಿತ ಮಂಡಳಿ ಸಂಚಾಲಕ ಎನ್ ವೆಂಕಟ್ರಮಣ ಭಟ್, ಎಸ್.ಡಿ.ಎಂ.ಸಿ ಸದಸ್ಯ ಮಹಾಲಿಂಗೇಶ್ವರ ಭಟ್ ಪಠ್ಯಪುಸ್ತಕಗಳ ಸಾಂಕೇತಿಕ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಮತ್ತು ಶೈಕ್ಷಣಿಕ ವರ್ಷಕ್ಕೆ ಶುಭ ಕೋರಿದರು.
ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ಎಸ್ ಶಿವರಾಮ ಶಾಸ್ತ್ರಿ ಪ್ರಾಸ್ತಾವಿಕ ಮಾತುಗಳೊಂದಿಗೆ ಪುಸ್ತಕದ ಮಹತ್ವವನ್ನು ತಿಳಿಸುತ್ತಾ ಎಲ್ಲರನ್ನು ಸ್ವಾಗತಿಸಿದರು. ಗಣಿತ ಶಿಕ್ಷಕ ಉದಯಕುಮಾರ್ ರೈ ಎಸ್ ವಂದಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬಾಳಿಲ ಶಾಲಾ ಆರಂಭೋತ್ಸವ ಮತ್ತು ಉಚಿತ ಪಠ್ಯಪುಸ್ತಕಗಳ ವಿತರಣೆ"