ಬಿಜೆಪಿ ರಾಜ್ಯಾಧ್ಯಕ್ಷನಾಗಿರುವುದು ಬಲು ದೊಡ್ಡ ಜವಾಬ್ದಾರಿ – ನಳಿನ್ ಕುಮಾರ್ ಕಟೀಲ್

October 12, 2019
8:53 PM

ಸುಳ್ಯ: ಒಬ್ಬ ಸಾಮಾನ್ಯ ಕಾರ್ಯಕರ್ತನಿಗೂ ರಾಜ್ಯಾಧ್ಯಕ್ಷನಾಗುವ ಅವಕಾಶ ಇರುವುದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಅಧ್ಯಕ್ಷನಾಗಲು ಅರ್ಹ. ಇಲ್ಲಿ ನಾನು ನಿಮ್ಮ ಪ್ರತಿನಿಧಿ ಅಷ್ಟೆ. ರಾಜ್ಯಾಧ್ಯಕ್ಷ ಎಂಬುದು ಹುದ್ದೆಯಲ್ಲ, ಅದು ಮಹತ್ತರವಾದ ಜವಾಬ್ಧಾರಿ. ಪಕ್ಷದ ಕಾರ್ಯಕರ್ತರ ನಂಬಿಕೆಗೆ ಚ್ಯುತಿ ಬಾರದಂತೆ ಆ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ನೀವು ಅರ್ಪಿಸಿದ ಸನ್ಮಾನ ಪಕ್ಷಕ್ಕೆ ಮತ್ತು ಕಾರ್ಯಕರ್ತರಿಗೆ ಸಂದದ್ದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮೊದಲ ಬಾರಿ ಸುಳ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಲೋಕಸಭೆಯಲ್ಲಿ 64 ಪಕ್ಷಗಳ ಪ್ರತಿನಿಧಿಗಳಿದ್ದಾರೆ. 63 ಪಕ್ಷಗಳು ವಂಶ ಪಾರಂಪರ್ಯ ಮತ್ತು ಜಾತಿಯ ಆಧಾರದಲ್ಲಿ ಆಯ್ಕೆ ನಡೆಸುತ್ತಿದ್ದರೆ, ಬಿಜೆಪಿಯಲ್ಲಿ ಮಾತ್ರ ಪ್ರಜಾಪ್ರಭುತ್ವದ ಆಧಾರದಲ್ಲಿ ಆಯ್ಕೆ ನಡೆಯುತ್ತದೆ ಎಂದು ಅವರು ಹೇಳಿದರು.

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ 150 ಪ್ಲಸ್ ಸ್ಥಾನ:

ಮುಂದಿನ ಮೂರು ವರ್ಷ ಬಿಜೆಪಿ ಸರಕಾರವೇ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಹದಿನೈದಕ್ಕೆ ಹದಿನೈದು ಸ್ಥಾನಗಳನ್ನೂ ಗೆಲ್ಲಲಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೂರೈವತ್ತು ಪ್ಲಸ್ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಅವರು ಹೇಳಿದರು‌. ಹಿರಿಯರ ಮಾರ್ಗದರ್ಶನ ಮತ್ತು ಕಾರ್ಯಕರ್ತರ ಪಡೆಯೊಂದಿಗೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಅವರು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ಎ.ವಿ.ತೀರ್ಥರಾಮ, ನ.ಪಂ. ಮಾಜಿ ಅಧ್ಯಕ್ಷರಾದ ಎನ್.ಎ. ರಾಮಚಂದ್ರ, ಪ್ರಕಾಶ್ ಹೆಗ್ಡೆ, ಪ್ರಮುಖರಾದ ಪಿ.ಕೆ. ಉಮೇಶ್, ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ. ಹರೀಶ್ ಕಂಜಿಪಿಲಿ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror