ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಮನವಿ

June 19, 2019
11:00 AM

ಮಂಗಳೂರು: ಕರಾವಳಿ ಭಾಗದ ಬಡಜನರ ಮೂಲಕಸುಬಾದ ಬೀಡಿ ಉದ್ಯಮಕ್ಕೆ ಯಾವುದೇ ರೀತಿಯ ತೆರಿಗೆ ವಿಧಿಸದಂತೆ ಕೋರಿ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ ಸದಾನಂದ ಗೌಡರಿಗೆ ಯೂನಿಯನ್ ಪದಾಧಿಕಾರಿಗಳು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಿ.ವಿ ಸದಾನಂದ ಗೌಡರು ಈ ಬಗ್ಗೆ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಬಳಿ ಮಾತನಾಡಲಾಗಿದ್ದು  ಈ ಸಂಬಂಧ ನಿರ್ಮಲಾ ಸೀತಾರಾಮನ್ ರವರು ಸಭೆ ಕರೆದಿರುವುದಾಗಿ ತಿಳಿಸಿರುತ್ತಾರೆ. ಮುಂದಿನ ಬಜೆಟ್ ನಲ್ಲಿ ಬೀಡಿ ಉದ್ಯಮಕ್ಕೆ ತೆರಿಗೆಯಿಂದ ವಿನಾಯಿತಿ ಮತ್ತು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಭರವಸೆಯನ್ನು ಡಿ.ವಿ ಸದಾನಂದ ಗೌಡರು ನೀಡಿದರು.

ಈ ಸಂದರ್ಭದಲ್ಲಿ ಉದ್ಯಮಿ,ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಯೂನಿಯನ್ ನ ಮುರಳೀಧರ ಶೆಟ್ಟಿ, ಜಲೀಲ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ
September 9, 2026
9:26 PM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror