ಬೆಳಂದೂರು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಇತಿಹಾಸ ವಿಭಾಗದ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು..
ಈ ಸಂದರ್ಭ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹರೀಶ್ ಶಾಂತಿ ಪುತ್ತೂರು, ಪ್ರಧಾನ ಕಾರ್ಯದರ್ಶಿ ಶ್ರೀ ನಾರಾಯಣ ಗುರು ವೈದಿಕ ಸಮಿತಿ ,ಮಂಗಳೂರು ಇವರು ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಅವರ ಸಮಾಜ ಸುಧಾರಣೆಯ ಮಹತ್ವವನ್ನು ತಿಳಿಸುತ್ತಾ ಪ್ರಸ್ತುತ ಸಮಾಜದ ಅಸಮಾನತೆಗಳನ್ನು ,ಅನ್ಯಾಯಗಳನ್ನು ,ತಾರತಮ್ಯಗಳನ್ನು ಮೌಡ್ಯಗಳನ್ನು ನಿವಾರಿಸಲು ವಿದ್ಯಾರ್ಥಿಗಳು ಕಟಿಬದ್ಧರಾದರೆ ಸಮಾನ ಸಮಾಜದ ಮಹಾತ್ಮರ ಕನಸನ್ನು ಸಾಕಾರ ಗೊಳಿಸಲು ಸಾಧ್ಯ ಎಂದು ತಿಳಿಸಿದರು.
ವಿಶ್ವನಾಥ ಮಾರ್ಕಜೆ ದ್ವೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲರಾದ ಪ್ರೊ.ಪದ್ಮನಾಭ. ಕೆ ಅಧ್ಯಕ್ಷತೆ ವಹಿಸಿದ್ದರು ,ರಾಷ್ಟ್ರೀಯ ಸೇವಾ ಯೋಜನೆ ಯೋಜನಾಕಾರಿ ಶ್ರೀ.ಸ್ವಾಮಿ.ಎಸ್ ಬೈಲಕುಪ್ಪೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕು.ಸಂಶೀನಾ ತೃತೀಯ ಬಿಎ ಸರ್ವರನ್ನು ಸ್ವಾಗತಿಸಿ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರೆ,ಕು.ಕೀರ್ತಿಕಾ ವಂದಿಸಿದರು.ಕು.ಕೃತಿಕಾ ತೃತೀಯ ಬಿಕಾಂ ಕಾರ್ಯಕ್ರಮ ನಿರೂಪಿಸಿದರು.