ಪುತ್ತೂರು: ಕಾಣಿಯೂರು – ಪುತ್ತೂರು ರಸ್ತೆಯ ನರಿಮೊಗರು ಎಂಬಲ್ಲಿ ತೂಫಾನ್ ವಾಹನವೊಂದು ಬೈಕ್ ಗೆ ಅಪಘಾತವೆಸಗಿ ಪರಾರಿಯಾಗಿದ್ದು, ಬೈಕ್ ಸವಾರ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಗಾಯಗೊಂಡ ಬೈಕ್ ಸವಾರ ಆಲಂಕಾರು ಗ್ರಾಮದ ಶಾಂತಿಮೊಗರು ನಿವಾಸಿ ಸತೀಶ್ . ಇವರು ಪುತ್ತೂರಿಗೆ ತನ್ನ ಬೈಕಿನಲ್ಲಿ ಕಾರ್ಯನಿಮಿತ್ತ ತೆರಳುತ್ತಿದ್ದಾಗ ನರಿಮೊಗರು ಎಂಬಲ್ಲಿ ಕಾಣಿಯೂರು ಕಡೆಗೆ ತೆರಳುತ್ತಿದ್ದ ತೂಫನ್ ವಾಹನ ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ ಸತೀಶ್ ಅವರನ್ನು ಪುತ್ತೂರು ಸರಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಪಿಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪರಾರಿಯಾದ ವಾಹನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಜೀಪು"