ಭತ್ತ, ಕಾಳುಮೆಣಸು ಬೆಳೆಗಳ ರಕ್ಷಣೆಗೆ ಅಗತ್ಯ ಕ್ರಮ : ಕೃಷಿ ವಿಜ್ಞಾನ ಕೇಂದ್ರ ಸಲಹೆ

May 30, 2019
9:00 AM

ಮಡಿಕೇರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಇನ್ನೇನು ಪ್ರಾರಂಭವಾಗಲಿದ್ದು, ರೈತರು ತಮ್ಮ ತಮ್ಮ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಸಂದ ರ್ಭದಲ್ಲಿ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್ ಅವರು ರೈತರಿಗೆ ಭತ್ತ, ಕಾಳು ಮೆಣಸು, ಅಡಿಕೆ ಬೆಳೆಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

Advertisement
Advertisement
Advertisement

ಜಿಲ್ಲೆಯ ರೈತರು ಬೆಳೆಯಲ್ಲಿ ಬರುವ ಅನೇಕ ಕೀಟ ಮತ್ತು ರೋಗಗಳನ್ನು ಕಡಿಮೆ ಮಾಡಿ ಇಳುವರಿಯನ್ನು ಹೆಚ್ಚಿಸಬೇಕೆಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್ ಅವರು ಕೆಲವೂಂದು ಸಲಹೆ ನೀಡಿದ್ದಾರೆ.

Advertisement

 

ಭತ್ತ:

Advertisement

ರೋಗ ರಹಿತ ಬಿತ್ತನೆ ಬೀಜಗಳನ್ನು ಮಾತ್ರ ನಾಟಿಗೆ ಉಪಯೋಗಿಸಬೇಕು ಮತ್ತು ಹೆಚ್ಚಿನ ಪ್ರಮಾಣದ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರವನ್ನು ಉಪಯೋಗಿಸಬೇಕು. ಪ್ರತೀ ಕಿ.ಗ್ರಾಂ ಬಿತ್ತನೆ ಬೀಜಕ್ಕೆ 4 ಗ್ರಾಂ ಕಾರ್ಬೆಂಡೆಜಿಮ್ (ಬ್ಯಾವಿಸ್ಟೀನ್) ಅಥವಾ ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾಫ್ 2 ಗ್ರಾಂ) ಎಂಬ ಶಿಲೀಂದ್ರನಾಶಕದಿಂದ ಕಡ್ಡಾಯವಾಗಿ ಬೀಜೋಪಚಾರ ಮಾಡಿ ಬಿತ್ತನೆಗೆ ಉಪಯೋಗಿಸಬೇಕು.

Advertisement

ಬೀಜದ ಆಯ್ಕೆ ಮತ್ತು ಬೀಜೋಪಚಾರ ಮಾಡುವ ವಿಧಾನ; ಪ್ರತೀ ಎಕರೆಗೆ ಶಿಫಾರಸ್ಸು ಮಾಡಿದ 25-30 ಕೆ.ಜಿ ಭತ್ತದ ಬೀಜವನ್ನು ತೆಗೆದುಕೂಂಡು 1:4 ಪ್ರಮಾಣದ ಉಪ್ಪಿನ ದ್ರಾವಣದಲ್ಲಿ (4 ಲೀ. ನೀರಿಗೆ 1 ಕೆ.ಜಿ ಉಪ್ಪು) ಅದ್ದಿ ಗಟ್ಟಿ ಮತ್ತು ಜೊಳ್ಳು ಬೀಜಗಳನ್ನು ಬೇರ್ಪಡಿಸಬೇಕು. ಗಟ್ಟಿಯಾದ ಬೀಜಗಳನ್ನು ಬೇರ್ಪಡಿಸಿದ ನಂತರ 2-3 ಬಾರಿ ತಣ್ಣೀರಿನಲ್ಲಿ ತೊಳೆದು ಸುಮಾರು 8-12 ಗಂಟೆಗಳ ಕಾಲ ಬಿತ್ತನೆ ಬೀಜವನ್ನು ನೀರಿನಲ್ಲಿ ನೆನಸಬೇಕು. ನೆನೆಸಿದ ಬೀಜಗಳನ್ನು ನೀರಿನಿಂದ ತೆಗೆದು ಎಕರೆಗೆ ಬೇಕಾದ 25-30 ಕೆ.ಜಿ ಬಿತ್ತನೆ ಬೀಜಕ್ಕೆ 100 ರಿಂದ 120 ಗ್ರಾಂ ಕಾರ್ಬೆಂಡೆಜಿಮ್ (ಪ್ರತಿ ಕೆ.ಜಿ ಬಿತ್ತನೆ ಬೀಜಕ್ಕೆ 4 ಗ್ರಾಂ) ಎಂಬ ಶಿಲೀಂದ್ರನಾಶಕವನ್ನು ಚೆನ್ನಾಗಿ ಮಿಶ್ರಣ ಮಾಡಿ ನೆರಳಿನಲ್ಲಿ ಒಣಗಿಸಬೇಕು.

ಈ ರೀತಿ ಬೀಜೋಪಚಾರ ಮಾಡಿದ ಬಿತ್ತನೆ ಬೀಜವನ್ನು ಒಂದು ಚೀಲದಲ್ಲಿ ಗಟ್ಟಿಯಾಗಿ ಕಟ್ಟಿ ಮೊಳಕೆಯೊಡೆಯಲು ಇಟ್ಟು ನಂತರ ಸಸಿಮಡಿಗೆ ಉಪಯೋಗಿಸಬೇಕು. ದೀರ್ಘಾವಧಿ ತಳಿಗಳ ನಾಟಿಯನ್ನು ಜುಲೈ ತಿಂಗಳ ಎರಡನೆ ವಾರದೊಳಗೆ ಕಡ್ಡಾಯವಾಗಿ ಮಾಡಲೇಬೇಕು. ದೀರ್ಘಾವಧಿ ತಳಿಗಳನ್ನು ತಡವಾಗಿ ನಾಟಿಮಾಡಿದರೆ ಬೆಂಕಿ ರೋಗದ ಭಾದೆ ತೀವ್ರವಾಗುತ್ತದೆ. ಸಸಿಯನ್ನು ನಾಟಿ ಮಾಡುವುದಕ್ಕಿಂತ ಮುಂಚಿತವಾಗಿ ಸಸಿ ಮಡಿಯ ಪೈರುಗಳ ತುದಿ ಭಾಗವನ್ನು ಕತ್ತರಿಸಿ ನಂತರ ನಾಟಿಗೆ ಉಪಯೋಗಿಸಬೇಕು. ಇದರಿಂದ ಕಾಂಡಕೊರೆಯುವ ಹುಳುವಿನ ಸಮಸ್ಯೆಯನ್ನು ಕಡಿಮೆ ಮಾಡಬಹುದು.

Advertisement

ಶಿಫಾರಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಎಕರೆಗೆ 65 ಕೆ.ಜಿ ಯೂರಿಯ, 150 ಕೆ.ಜಿ ಶಿಲಾರಂಜಕ ಮತ್ತು 60 ಕೆ.ಜಿ ಮ್ಯೂರೇಟ್ ಆಪ್ಟ್ಯಾಪೊಟ್ಯಾಶ್  ಮಾತ್ರ ಕೊಡಬೇಕು. ಶಿಫಾರಸ್ಸಿಗಿಂತ ಹೆಚ್ಚಿನ ಪ್ರಮಾಣದ ಯೂರಿಯವನ್ನು ಕೊಡಬಾರದು. ಶಿಫಾರಸ್ಸಿಗಿಂತ ಹೆಚ್ಚಿನ ಪ್ರಮಾಣದ ಯೂರಿಯವನ್ನು ಕೊಟ್ಟರೆ ಬೆಂಕಿ ರೋಗ ಬರುವ ಸಂಭವವುಂಟು. ಶಿಫಾರಸ್ಸಿನ 1/3 ಭಾಗ ಯೂರಿಯ, ಪೂರ್ತಿ ಶಿಲಾರಂಜಕ ಮತ್ತು ಅರ್ಧ ಭಾಗ ಪೊಟ್ಯಾಷನ್ನು ನಾಟಿ ಸಮಯದಲ್ಲಿ ಭೂಮಿಗೆ ಸೇರಿಸಬೇಕು. ನಾಟಿ ಮಾಡಿದ 30 ದಿನಗಳ ಮತ್ತೊಮ್ಮೆ ಯೂರಿಯ ಹಾಗೂ ಪೊಟ್ಯಾಷ್ ಗೊಬ್ಬರವನ್ನು ಕೊಡಬೇಕು. ನಾಟಿಗೆ 21 ರಿಂದ 28 ದಿನಗಳ ಸಸಿಗಳನ್ನೆ ಉಪಯೋಗಿಸಬೇಕು.
ಪ್ರತೀ ಮೂರು ಬೆಳೆಗೆ ಒಂದು ಸಾರಿಯಂತೆ ಎಕರೆಗೆ 8 ಕೆ.ಜಿ. ಸತುವಿನ ಸಲ್ಫೇಟನ್ನು 25 ಕೆ.ಜಿ ಮರಳಿನ ಜೊತೆಯಲ್ಲಿ ಮಿಶ್ರಣಮಾಡಿ ನಾಟಿ ಮಾಡುವ ಸಂದರ್ಭದಲ್ಲಿ ಮಣ್ಣಿಗೆ ಸೇರಿಸಬೇಕು ಮತ್ತು 2.0 ಕೆ.ಜಿ ಬೋರಾಕ್ಸ್‍ನ್ನು 5 ಕೆ.ಜಿ ಕೊಟ್ಟಿಗೆ ಗೊಬ್ಬರದ ಜೊತೆಯಲ್ಲಿ ಮಿಶ್ರಣಮಾಡಿ ನಾಟಿಗೆ ಮುನ್ನ, ಇತರೆ ರಸಗೊಬ್ಬರಗಳ ಜೊತೆ ಬೆರೆಸದಂತೆ ಪ್ರತ್ಯೇಕವಾಗಿ ಮಣ್ಣಿಗೆ ಸೇರಿಸಿ. ಇದರಿಂದ ಭತ್ತದಲ್ಲಿ ಜಳ್ಳಿನ ಪ್ರಮಾಣ ಕಡಿಮೆಯಾಗುತ್ತದೆ.

ಕಾಳುಮೆಣಸು:

Advertisement

ಚಿಬ್ಬು ರೋಗವನ್ನು ಹತೋಟಿ ಮಾಡಲು 1 ಗ್ರಾಂ ಕಾರ್ಬೆಂಡೆಜಿಮ್‍ನ್ನು ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸುವುದು. ರೋಗ ಬಾಧೆಯಿಂದ ಬಳಲಿ ಸತ್ತು ಹೋದ ಬಳ್ಳಿಗಳನ್ನು ಬೇರು ಸಮೇತ ಕಿತ್ತು ತೋಟದಿಂದ ಹೊರಗೊಯ್ದು ನಾಶಪಡಿಸಬೇಕು. ಪ್ರತೀ ಬಳ್ಳಿಗೆ 50 ರಿಂದ 60 ಗ್ರಾಂ ಟ್ರೈಕೋಡರ್ಮ ಎಂಬ ಜೈವಿಕ ಶಿಲೀಂದ್ರವನ್ನು 1 ಕೆ.ಜಿ ಬೇವಿನ ಹಿಂಡಿ ಅಥವಾ 5 ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು ಅಥವಾ 4 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಮತ್ತು ಅರ್ಧ ಕೆ.ಜಿ ಬೆಲ್ಲವನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್‍ನಷ್ಟು) ಸುರಿಯಬೇಕು.
ಬೇಸಾಯ ಕ್ರಮಗಳನ್ನು ಅನುಸರಿಸುವಾಗ ಬಳ್ಳಿಯ ಬೇರುಗಳಿಗೆ ಗಾಯಗಳಾಗದಂತೆ ನೋಡಿಕೊಳ್ಳಬೇಕು. ಮುನ್ನೆಚ್ಚರಿಕೆಯಾಗಿ ಮುಂಗಾರಿಗೆ ಮುನ್ನ ಬಳ್ಳಿ, ಎಲೆ ಮತ್ತು ಕಾಂಡ ಪೂರ್ಣ ತೊಯ್ಯುವಂತೆ ಶೇ. 1 ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಬೇಕು.
ಟ್ರೈಕೋಡರ್ಮ ಅಥವಾ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬುಡಕ್ಕೆ ಹಾಕದಿದ್ದರೆ ಪ್ರತಿ ಬಳ್ಳಿಗೆ 3 ರಿಂದ 5 ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್‍ಗೆ 500 ಗ್ರಾಂ) ದ್ರಾವಣದಿಂದ ಬಳ್ಳಿಯ ಬುಡದ ಭಾಗವನ್ನು ನೆನೆಸಬೇಕು ಮತ್ತು ಶೇ. 1 ರ ಬೋರ್ಡೊ ದ್ರಾವಣ ಅಥವಾ 3.0 ಮಿ.ಲಿ. ಪೊಟ್ಯಾಸಿಯಂ ಪಾಸ್ಪೋನೇಟ್‍ನ್ನು ಪ್ರತಿ ಲೀಟರ್ ನೀರಿಗೆ ಬೆರಸಿದ ದ್ರಾವಣವನ್ನು ಎಲೆಗಳಿಗೆ ಸಿಂಪರಣೆ ಮಾಡಬೇಕು. ಶಿಫಾರಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಗಿಡಕ್ಕೆ 300 ಗ್ರಾಂ ಯೂರಿಯಾ, 275 ಗ್ರಾಂ ಶಿಲಾರಂಜಕ ಮತ್ತು 450 ಗ್ರಾಂ. ಎಂ.ಓ.ಪಿನ್ನು ಕೊಡಬೇಕು. ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಬಳ್ಳಿಗೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು.

Advertisement

ನೆಲದ ಮೇಲೆ ಹರಡಿರುವ ಹಾಗೂ ಹೆಚ್ಚಾದ ಕವಲು ಬಳ್ಳಿಗಳನ್ನುಮುಂಗಾರಿಗೆ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆ ಕಟ್ಟಿ ಬೆಳೆಯಲು ಬೀಡಬೇಕು. ಕತ್ತರಿಸಿದ ಭಾಗಕ್ಕೆ ಕಾಪರ್ ಆಕ್ಸಿಕ್ಲೋರೈಡ್ ಪೇಸ್ಟನಿಂದ ಲೇಪನ ಮಾಡಬೇಕು. ಕಾಫಿû ಮತ್ತು ಅಡಿಕೆ ತೋಟಗಳಲ್ಲಿ ಒಂದಕ್ಕಿಂತ ಹೆಚ್ಚು ತಳಿಗಳಿರುವಂತೆ ಕಾಳುಮೆಣಸು ಬಳ್ಳಿಗಳನ್ನು ನಾಟಿ ಮಾಡಬೇಕು. ಬಳ್ಳಿಯ ಗಾತ್ರ ಹೆಚ್ಚಿಸಲು 5-8 ಬಳ್ಳಿಗಳನ್ನು ನಾಟಿಮಾಡುವುದು. ಜಂತುಹುಳುಗಳ ಬಾಧೆಯನ್ನು ತಪ್ಪಿಸಲು (ನಿಧಾನ ಸೊರಗು ರೋಗ) ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚೆ ಪ್ರತೀ ಬಳ್ಳಿಗೆ 1 ಕಿ. ಗ್ರಾಂ ಬೇವಿನ ಹಿಂಡಿ ಮತ್ತು 10 ಗ್ರಾಂ ಫೋರೇಟ್ ಹರಳುಗಳನ್ನು ಗಿಡದ ಬುಡಕ್ಕೆ ಹಾಕಬೇಕು.

ಅಡಿಕೆ;

Advertisement

 

Advertisement

ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚಿತವಾಗಿ ತೋಟದಲ್ಲಿರುವ ರೋಗ ಪೀಡಿತ ಗೊಂಚಲು ಮತ್ತು ಅಡಿಕೆ ಕಾಯಿಗಳನ್ನು ಆರಿಸಿ ತೆಗೆದು ನಾಶಗೊಳಿಸಬೇಕು. ಕೊಳೆ ರೋಗವನ್ನು ಹತೋಟಿ ಮಾಡಲು ರೈತರು ಶೇ. 1 ರ ಬೋರ್ಡೊ ದ್ರಾವಣವನ್ನು ಸರಿಯಾಗಿ ತಯಾರಿಸಿ ಮೊದಲನೆ ಸಿಂಪರಣೆಯನ್ನು ಜೂನ್ ತಿಂಗಳ ಮೊದಲನೆ ವಾರದೊಳಗೆ ಕಡ್ಡಾಯವಾಗಿ ಸಿಂಪರಣೆ ಮಾಡಲೇಬೇಕು. ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುವುದಕ್ಕಿಂತ ಮೊದಲು ಕಡ್ಡಾಯವಾಗಿ ದ್ರಾವಣದ ರಸಸಾರವನ್ನು ಪರೀಕ್ಷಿಸಿ ನಂತರ ಸಿಂಪರಣೆಗೆ ಉಪಯೋಗಿಸಬೇಕು. ನೀರು ನಿಲ್ಲದ ಹಾಗೆ ಬಸಿಗಾಲುವೆಗಳನ್ನು ನಿರ್ಮಿಸಬೇಕು. ಅಡಿಕೆ ಕಾಯಿ ಹೊಡೆದು ಬೀಳುವ /ಸೀಳುವ ಸಮಸ್ಯೆ ಇದ್ದಲ್ಲಿ ಪ್ರತಿ ಅಡಿಕೆ ಗಿಡಕ್ಕೆ 25 ರಿಂದ 30 ಗ್ರಾಂ ಬೋರಾಕ್ಸ್‍ನ್ನು ಕೊಡಬೇಕು. ಪ್ರತಿ ಮರವೊಂದಕ್ಕೆ ವರ್ಷಕ್ಕೆ 20 ಕಿ. ಗ್ರಾಂ ನಂತೆ ಕೊಟ್ಟಿಗೆ ಗೊಭ್ಬರ ಹಾಗೂ ಹಸಿರೆಲೆ ಗೊಬ್ಬರವನ್ನು ಕೊಡಬೇಕು.
ಪ್ರತಿ ಗಿಡಕ್ಕೆ 220 ಗ್ರಾಂ ಯೂರಿಯಾ, 200 ಗ್ರಾಂ ಶಿಲಾರಂಜಕ ಮತ್ತು 230 ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಗಿಡಕ್ಕೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು.

ಬೇರು ಹುಳುವಿನ ಬಾಧೆಯಿರುವ ಪ್ರದೇಶದಲ್ಲಿ ರೈತರು ಇದರ ಹತೋಟಿ ಕ್ರಮಗಳನ್ನು ಅನುಸರಿಸಲು ಇದು ಸೂಕ್ತ ಸಮಯವಾಗಿರುವುದರಿಂದ ಮೇ ಅಥವಾ ಜೂನ್ ತಿಂಗಳ ಒಳಗೆ ಅಡಿಕೆ ಮರದ ಸುತ್ತಲೂ ಹಗುರವಾಗಿ ಅಗೆತ ಮಾಡಿ ಪ್ರತೀ ಮರಕ್ಕೆ 20 ಗ್ರಾಂ  ಫೋರೆಟ್ ಹರಳನ್ನು ಹಾಕಿ ಮಣ್ಣಿನಿಂದ ಮುಚ್ಚಬೇಕು ಅಥವಾ ಕ್ಲೋರೋಪೈರಿಫಾಸ್ 20 ಇ.ಸಿ. (5 ಮಿ.ಲೀ) ಅಥವಾ ಇಮಿಡಾಕ್ಲೋಪ್ರಿಡ್ 200 ಎಸ್. ಎಲ್ (0.5 ಮಿ.ಲೀ) ಎಂಬ ಕೀಟನಾಶಕವನ್ನು ಪ್ರತೀ ಲೀಟರ್ ನೀರಿಗೆ ಮಿಶ್ರಣ ಮಾಡಿ ಪ್ರತಿಯೊಂದು ಮರಕ್ಕೆ ಸುಮಾರು 2 ರಿಂದ 3 ಲೀಟರ್ ದ್ರಾವಣವನ್ನು ಮರದ ಬುಡದ ಸುತ್ತಲೂ ಸುರಿಯಬೇಕು.

Advertisement

ಹೆಚ್ಚಿನ ಮಾಹಿತಿಗೆ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್, ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: 08274-247274 ನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡಾನೆ ದಾಳಿ | ಮೃತಪಟ್ಟ ರೈತನ ಕುಟುಂಬಕ್ಕೆ ಸರ್ಕಾರದಿಂದ 15 ಲಕ್ಷ ಪರಿಹಾರ
December 1, 2024
8:16 PM
by: The Rural Mirror ಸುದ್ದಿಜಾಲ
ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಮಾಲೀಕರು ಹೆಚ್ಚು ಪಡೆಯದಂತೆ ಜಿಲ್ಲಾಡಳಿತ ಸೂಚನೆ
December 1, 2024
12:18 PM
by: The Rural Mirror ಸುದ್ದಿಜಾಲ
ಚಿತ್ರದುರ್ಗ | ಕೊಳವೆ ಬಾವಿ ಕೊರೆದು ಅಂತರ್ಜಲ ಬಳಕೆ ಮಾಡಲು ಅನುಮತಿ ಪಡೆಯಬೇಕು
November 30, 2024
6:48 AM
by: The Rural Mirror ಸುದ್ದಿಜಾಲ
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ 
November 28, 2024
11:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror