ಸುಳ್ಯ: ಲಂಚ ಪಡೆಯುತ್ತಿದ್ದ ಸುಳ್ಯದ ಉಪನೋಂದಣಾಧಿಕಾರಿ ಕಚೇರಿಯ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಆದೇಶ ನೀಡಿದ್ದಾರೆ.
ಸುಳ್ಯ ತಾಲೂಕು ಕಚೇರಿಯಲ್ಲಿ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ವಿಷಯ ಪ್ರಸ್ತಾಪಿಸಿದರು. ಅಧಿಕಾರಿ ಲಂಚ ಪಡೆಯುತ್ತಿರುವ ವೀಡಿಯೋ ಮಾಧ್ಯಮಗಳ ಮೂಲಕ ಹೊರ ಬಂದಿದೆ ಮತ್ತು ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಆಗಿದೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಸರಕಾರಕ್ಕೆ ಕೆಟ್ಟ ಹೆಸರು ತರುತ್ತಿದೆ ಎಂದರು. ಇದಕ್ಕೆ ಗರಂ ಆದ ಐವನ್ ಡಿಸೋಜ ಈ ರೀತಿಯ ಅಧಿಕಾರಿಗಳನ್ನು ಸಹಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಕೂಡಲೇ ಕಠಿಣ ಕ್ರಮ ಜರುಗಿಸಬೇಕು ಎಂದು ಸಹಾಯಕ ಕಮೀಷನರ್ ರಿಗೆ ಆದೇಶ ನೀಡಿದರು.
ಕ್ರಮ ಕೈಗೊಳ್ಳಲಾಗಿದ್ದು ಕೂಡಲೇ ಕ್ರಮ ಆಗಲಿದೆ ಎಂದು ಸಹಾಯಕ ಕಮೀಶನರ್ ಹೆಚ್.ಕೆ.ಕೃಷ್ಣಮೂರ್ತಿ ಹೇಳಿದರು. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ತಿಳಿಸಿದ್ದಾಗಿ ಶಾಸಕ ಅಂಗಾರ ಸಭೆಯಲ್ಲಿ ಹೇಳಿದರು. ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಬೇಡಿಕೆ ಕೇಳಿ ಬಂತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮಕ್ಕೆ ಐವನ್ ಆದೇಶ"