ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಯುವಕ ಪುತ್ತೂರಿನ ದರ್ಬೆ ನಿವಾಸಿ ದೇವರಾಜ(18) ಪರಾರಿಯಾಗಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಸೋಂಕಿತ ಯುವಕನ ವಿರುದ್ಧ ಕೇಸು ದಾಖಲಾಗಿದೆ. ಪೊಲೀಸರು ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಿದರೆ ತಕ್ಷಣವೇ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಮನವಿ ಮಾಡಿದ್ದಾರೆ.
ಈ ಯುವಕ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಆತನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವೈದ್ಯರು ಹಾಗೂ ಸಿಬಂದಿಗಳಿಂದ ತಪ್ಪಿಸಿ ಸೋಂಕಿತ ಪರಾರಿಯಾಗಿದ್ದಾನೆ.
ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಿದರೆ 08242220530 ಸಂಖ್ಯೆಗೆ ಕರೆ ಮಾಡಲು ಪಾಂಡೇಶ್ವರ ಪೊಲೀಸರು ಮನವಿ ಮಾಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement