ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಘೋಷಣೆ

October 20, 2019
10:14 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯ ದಿನಾಂಕವವನ್ನು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ನವೆಂಬರ್ 12ರಂದು ಪಾಲಿಕೆಯ ವ್ಯಾಪ್ತಿಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

Advertisement

ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಅ.24ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಅ.31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನವೆಂಬರ್ 2ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ನ.4ರಂದು ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ನ.12ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಮರು ಮತದಾನ ಇದ್ದಲ್ಲಿ ನ.13ರಂದು ಮತದಾನ ಪ್ರಕ್ರಿಯೆ ನಡೆಸಬಹುದಾಗಿದೆ. ನ.14ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ನೀತಿ ಸಂಹಿತೆಯು ರವಿವಾರದಿಂದಲೇ ಆರಂಭವಾಗಿದ್ದು, ನ.14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ.

 

14 ಸ್ಥಳೀಯ ಸಂಸ್ಥೆಗಳ ಚುನಾವಣೆ: ರಾಜ್ಯದ ಎರಡು ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯತ್ ಸೇರಿ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನ.12ರಂದು ಚುನಾವಣೆ ಘೋಷಿಸಿದೆ.

ವೆಚ್ಚ ಮಿತಿ: ಮಹಾನಗರ ಪಾಲಿಕೆ ವ್ಯಾಪ್ತಿಗೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಯು ಮೂರು ಲಕ್ಷ ರೂ.ವರೆಗೆ ಗರಿಷ್ಠ ವೆಚ್ಚ ಮಾಡಬಹುದಾಗಿದೆ.

ರಾಜಕೀಯ ಪಕ್ಷಗಳ‌ ಬ್ಯಾನರ್, ಕಟೌಟ್ ತೆರವುಗೊಳಿಸಲು ಸೂಚನೆ: ಮಂಗಳೂರು ಮಹಾನಗರಪಾಲಿಕೆಗೆ ಚುನಾವಣೆ ಘೋಷಣೆಯಾಗಿದ್ದು, ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ತಕ್ಷಣದಿಂದಲೇ ಜಾರಿಗೆ ಬಂದಿದೆ.  ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಹಾಕಿರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತರು ಸೂಚಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror