ಮಡಿಕೇರಿಯಲ್ಲಿ ಹುಚ್ಚ ವೆಂಕಟನ “ಹುಚ್ಚು” ಬಿಡಿಸಿದ ಸಾರ್ವಜನಿಕರು…!

August 29, 2019
10:10 PM

ಮಡಿಕೇರಿ :ನಟ ಹುಚ್ಚ ವೆಂಕಟನ ಹುಚ್ಚಾಟದಿಂದ ಬೇಸತ್ತ ಸಾರ್ವಜನಿಕರು ಗೂಸಾ ನೀಡಿದ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.

ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ ಮಾರುತಿ ಕಾರೊಂದಕ್ಕೆ ಹಾನಿಗೊಳಿಸಿದ ಕಾರಣಕ್ಕಾಗಿ ಅಸಮಾಧಾನಗೊಂಡ ಕೆಲವು ಯುವಕರು ವೆಂಕಟನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದರು.
ನಗರದ ಕೆ ಎಸ್‍ ಆರ್ ಟಿಸಿ ಬಸ್ ಡಿಪೋ ಬಳಿ ಇಂದು ಮಧ್ಯಾಹ್ನ ದಿಢೀರ್ ಆಗಿ ಪ್ರತ್ಯಕ್ಷವಾದ ಹುಚ್ಚ ವೆಂಕಟ್ ದಾರಿ ಬದಿಯಲ್ಲಿ ನಿಂತಿದ್ದರು. ಇವರನ್ನು ಗಮನಿಸಿದ ದಿಲೀಪ್ ಎಂಬ ಯುವಕ “ನೀವು ಹುಚ್ಚ ವೆಂಕಟ್ ಅಲ್ವಾ” ಎಂದು ಕುತೂಹಲದಿಂದ ಕೇಳಿದ್ದಾರೆ. ಇದನ್ನೇ ತಪ್ಪಾಯಿತು ಎಂದು ಭಾವಿಸಿದ ವೆಂಕಟ್ “ಏನೋ ಗುರಾಯಿಸ್ತೀಯ” ಎಂದು ದಿಲೀಪ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ತಪ್ಪಿಸಿಕೊಂಡು ಓಡುತ್ತಿದ್ದಂತೆ ಕುಪಿತಗೊಂಡ ವೆಂಕಟ್ ಯುವಕನ ಮಾರುತಿ-800 ಕಾರಿನ ಗಾಜನ್ನು ಪುಡಿ ಮಾಡಿದ್ದಾನೆ.

ಹುಚ್ಚ ವೆಂಕಟನ ಹುಚ್ಚಾಟ ಮಿತಿ ಮೀರುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರ್ವಜನಿಕರು ಸರಿಯಾಗಿಯೇ ಗೂಸ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರ ಠಾಣಾ ಪೊಲೀಸರು ವೆಂಕಟನನ್ನು ಠಾಣೆಗೆ ಕರೆದೊಯ್ದು ಬುದ್ದಿ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror