ಮಡಿಕೇರಿ ಕೋರ್ಟ್‍ಗೆ ಶಂಕಿತ ನಕ್ಸಲ್ ಮುಖಂಡ ರೂಪೇಶ್ ಹಾಜರು

October 25, 2019
11:00 AM

ಮಡಿಕೇರಿ  : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯ್ ಕುಮಾರ್ ಅವರ ಸಮ್ಮುಖದಲ್ಲಿ ಪ್ರಕರಣದ ಕುರಿತು ರೂಪೇಶ್‍ನ ವಿಚಾರಣೆ ನಡೆಯಿತು. ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ನ.14ಕ್ಕೆ ಮುಂದೂಡಿದರು.

ನ್ಯಾಯಾಲಯದ ಮುಖ್ಯ ದ್ವಾರದಿಂದ ಹೊರ ಬಂದ ರೂಪೇಶ್ ಯಾವುದೇ ಘೋಷಣೆಗಳನ್ನು ಮೊಳಗಿಸದೆ ಪೊಲೀಸ್ ವಾಹನವೇರಿದ. ಬಳಿಕ ಬಿಗಿ ಪೊಲೀಸ್ ಭದ್ರತೆಯಲ್ಲಿ ರೂಪೇಶ್‍ನನ್ನು ಕೇರಳದ ವೈವೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ಕೇಂದ್ರ ಹಾಗೂ ರಾಜ್ಯ ಗುಪ್ತದಳ, ರಾಜ್ಯ ಆಂತರಿಕ ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಫ್ತಿಯಲ್ಲಿ ನ್ಯಾಯಾಲಯಲ್ಲಿ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror