ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

September 16, 2019
2:00 PM

ಮಡಿಕೇರಿ: ಮಡಿಕೇರಿ ದಸರಾ ಜನೋತ್ಸವ ಅಂಗವಾಗಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟಂಬರ್ 30 ರ ಸೋಮವಾರದಿಂದ ಅಕ್ಟೋಬರ್ 8 ರವರೆಗೆ ಜರುಗಲಿದೆ. ಈ ದಿನಗಳಲ್ಲಿ ಮಡಿಕೇರಿಯ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿತ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ, ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಕಲಾವಿದರು, ಕಲಾತಂಡಗಳು ತಮ್ಮ ಹೆಸರು, ಪ್ರದರ್ಶಿಸಲು ಇಚ್ಚಿಸುವ ಕಲಾಪ್ರಕಾರ, ಅನುಭವ, ತಂಡದಲ್ಲಿನ ಕಲಾವಿದರ ಸಂಖ್ಯೆ, ವಿಳಾಸ, ಸಂಪರ್ಕ ದೂರವಾಣಿ ಇತ್ಯಾದಿ ವಿವರಗಳೊಂದಿಗೆ ಅರ್ಜಿ ಸಲ್ಲಿಸತಕ್ಕದ್ದು. ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 22 ಕೊನೇ ದಿನಾಂಕವಾಗಿರುತ್ತದೆ. ಅನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್.ಬಿ.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಆರ್.ಬಿ.ರವಿ. ಅಧ್ಯಕ್ಷರು, ಸಾಂಸ್ಕೃತಿಕ ಸಮಿತಿ ಮಡಿಕೇರಿ ನಗರ ದಸರಾ ಜನೋತ್ಸವ, ದಸರಾ ಜನೋತ್ಸವ ಕಛೇರಿ, ನಗರಸಭೆ ಸಂಕೀರ್ಣ, ಮಡಿಕೇರಿ -571201 :  ದಸರಾ ಸಾಂಸ್ಕೃತಿಕ ಸಮಿತಿ ಸಂಪರ್ಕ ದೂರವಾಣಿ – 8660306573. 9844060174 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ
ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು
March 17, 2025
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror