ಮತ್ತೆ ಶುರುವಾಯ್ತಾ ಕಸ್ತೂರಿರಂಗನ್ ಬಿಸಿ…! ಭಾಗಮಂಡಲದಲ್ಲಿ ದಿಢೀರ್ ಸರ್ವೆ ನಡೆಸಿದ ಅರಣ್ಯ ಇಲಾಖೆ ನಡೆ ನಿಗೂಢ

June 2, 2019
1:00 PM

ಮಡಿಕೇರಿ : ಡಾ.ಕಸ್ತೂರಿರಂಗನ್ ವರದಿಯ ತೂಗುಗತ್ತಿಯಡಿಯಲ್ಲೇ ದಿನದೂಡುತ್ತಿದ್ದ ಭಾಗಮಂಡಲದ ತಣ್ಣಿಮಾನಿ ಗ್ರಾಮಸ್ಥರಿಗೆ ಆಘಾತವೊಂದು ಎದುರಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ದಿಢೀರ್ ಸರ್ವೆ ಕಾರ್ಯ ಆರಂಭಿಸಿರುವ ಅರಣ್ಯ ಇಲಾಖೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

Advertisement
Advertisement
Advertisement

ಅರಣ್ಯಾಧಿಕಾರಿಗಳ ಕ್ರಮದಿಂದ ದಾರಿ ತೋಚದಾಗಿರುವ ಗ್ರಾಮಸ್ಥರು ಇಂದು ಜಿಲ್ಲಾಡಳಿತವನ್ನು ಭೇಟಿಯಾಗಿ ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸಲು ಸೂಚನೆ ನೀಡುವಂತೆ ಮನವಿ ಮಾಡಿದರು.
ಆತಂಕಕ್ಕೆ ಒಳಗಾದ ತಣ್ಣಿಮಾನಿ ಗ್ರಾಮ ನಿವಾಸಿಗಳು ಏಕಾಏಕಿ ಸರ್ವೆ ಕಾರ್ಯ ಆರಂಭಿಸುವ ಮೂಲಕ ಕೃಷಿ ಜಮೀನುಗಳನ್ನು ‘ಅರಣ್ಯ’ ಎಂದು ಹೇಳುವ ಮೂಲಕ ಅರಣ್ಯ ಅಧಿಕಾರಿಗಳು ಕಿರುಕುಳ ನೀಡಲಾರಂಭಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸರ್ವೆ ಕಾರ್ಯವನ್ನು ಸ್ಥಗಿತಗೊಳಿಸದಿದ್ದಲ್ಲಿ ಭಾಗಮಂಡಲ ಹೋಬಳಿಯ ಎಲ್ಲಾ ಗ್ರಾಮಗಳ ಗ್ರಾಮಸ್ಥರು ಒಗ್ಗೂಡಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಗ್ರಾಮಸ್ಥರ ಪರವಾಗಿ ಮಾತನಾಡಿದ ಮಡಿಕೇರಿ ತಾಲೂಕು ಲ್ಯಾಂಪ್ಸ್ ನಿರ್ದೇಶಕ ಹಾಗೂ ಬಿಜೆಪಿ ಎಸ್‍ಟಿ ಮೋರ್ಚಾದ ಅಧ್ಯಕ್ಷ ಮಿಟ್ಟು ರಂಜಿತ್ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಾಳನ ರವಿ ಅವರುಗಳು ಅರಣ್ಯ ಇಲಾಖೆ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕೊಡಗಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯ ಹೆಸರಿನಲ್ಲಿ ಅರಣ್ಯದ ಅಂಚಿನಲ್ಲಿರುವ ಗ್ರಾಮಗಳಲ್ಲಿ ಸರ್ವೆ ಕಾರ್ಯವನ್ನು ದಿಢೀರ್ ಆಗಿ ಆರಂಭಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಆ ಜಾಗ ಅರಣ್ಯ ಇಲಾಖೆಗೆ ಸೇರಿದ್ದೆಂದು ಹೇಳುವ ಮೂಲಕ ವಿನಾ ಕಾರಣ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.
ಕಳೆದ 25-30 ವರ್ಷಗಳ ಹಿಂದೆ ಕಂದಾಯ ಜಮೀನಿನ ಪಕ್ಕದಲ್ಲಿದ್ದ ಜಮೀನನ್ನು ಅರಣ್ಯ ಇಲಾಖೆಯವರು ಸರ್ವೆ ಮಾಡಿ ತಮ್ಮ ಗಡಿ ಭಾಗ ಗುರುತಿಸಿ ಹದ್ದುಬಸ್ತು ಮಾಡಿ ಸೋಲಾರ್ ಬೇಲಿ ಅಳವಡಿಸಿದ್ದರೂ, ಇದೀಗ ಜನವಸತಿ ಇರುವ ಕಂದಾಯ ಜಾಗವನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರುಗಳು ಆರೋಪಿಸಿದರು.
ಗ್ರಾಮದ ಅರಣ್ಯದ ಅಂಚಿನಲ್ಲಿರುವ ಪ್ರದೇಶವು ಕಂದಾಯ ಜಾಗವಾಗಿದ್ದು, ಇಲ್ಲಿ ಸುಮಾರು 70-80 ವರ್ಷಗಳಿಂದ ಜನರು ಕೃಷಿ ಮಾಡಿಕೊಂಡು ವಾಸವಾಗಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹಾಗೂ ಇತರ ಎಲ್ಲಾ ಜನಾಂಗದ ಕಡು ಬಡವರೇ ಈ ಪ್ರದೇಶದಲ್ಲಿದ್ದು ಅತ್ಯಂತ ಕಷ್ಟದಿಂದ ಕೂಲಿ ಮಾಡಿ ಜೀವನ ಸಾಗಿಸಿಕೊಂಡು ಬರುತ್ತಿದ್ದಾರೆ. ಈ ಪ್ರದೇಶಗಳಿಗೆ ಭಾಗಮಂಡಲ ಗ್ರಾಮ ಪಂಚಾಯಿತಿಯಿಂದ ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಸವಲತ್ತುಗಳನ್ನು ಒದಗಿಸಲಾಗಿದೆ. ಆದರೂ ಕೂಡ ಅರಣ್ಯ ಇಲಾಖೆಯವರು ಏಕಾಏಕಿ ಈ ಜಾಗ ಅರಣ್ಯಕ್ಕೆ ಸೇರಿದ್ದೆಂದು ಹೇಳಿಕೊಂಡು ಸರ್ವೆ ಕಾರ್ಯ ಆರಂಭಿಸಿದ್ದಾರೆ ಎಂದು ಟೀಕಿಸಿದರು.
ಕಳೆದ ಎರಡು ವರ್ಷಗಳ ಹಿಂದೆ ಇದೇ ರೀತಿ ಸರ್ವೆ ಕಾರ್ಯ ಆರಂಭಿಸಿದಾಗ, ಗ್ರಾಮಸ್ಥರು ಮೂರು ದಿನಗಳ ಕಾಲ ಅರಣ್ಯ ಇಲಾಖೆ ಕಚೇರಿ ಎದುರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದಾಗ ಮುಂದೆ ಈ ರೀತಿಯ ತೊಂದರೆ ಮಾಡುವುದಿಲ್ಲ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಇದೀಗ ರಾಜ್ಯ ಸರಕಾರದ ಆದೇಶವಿದೆ ಎಂದು ಹೇಳಿಕೊಂಡು ಅಧಿಕಾರಿಗಳು ಸರ್ವೆ ಕಾರ್ಯ ಆರಂಭಿಸಿದ್ದು, ಗ್ರಾಮಸ್ಥರು ಕಷ್ಟಪಟ್ಟು ಬೆಳೆದಿರುವ ಕೃಷಿಯನ್ನೂ ಹಾಳುಗೆಡವಿದ್ದಾರೆ. ಜಾಗದ ವಾರಸುದಾರರು ಇಲ್ಲದಿರುವ ಸಂದರ್ಭದಲ್ಲಿ ಸರ್ವೆ ಕಾರ್ಯ ನಡೆಸುತ್ತಿದ್ದು, ಮನೆಯಲ್ಲಿರುವವರಿಂದ ಬಲವಂತವಾಗಿ ಸಹಿ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಗ್ರಾಮಸ್ಥರಾದ ಕೆ.ಆರ್.ದಾಸಪ್ಪ, ದೇವಂಗೋಡಿ ಭಾಸ್ಕರ, ಕೆ.ಕೆ.ಪಾರ್ವತಿ ಹಾಗೂ ಕೆ.ಸಿ.ಸರಸ್ವತಿ ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಸಂದರ್ಭ ಗ್ರಾಮದ 20 ಕ್ಕೂ ಹೆಚ್ಚು ಕುಟುಂಬಗಳ ಸದಸ್ಯರು  ಹಾಜರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ವ್ಯಾಪಾರ ಉತ್ತೇಜಿಸಲು ಪ್ರಯತ್ನಿಸುವ ಮಸೂದೆಗಳು ಲೋಕಸಭೆಯಲ್ಲಿ ಮಂಡನೆ |
December 3, 2024
7:10 AM
by: The Rural Mirror ಸುದ್ದಿಜಾಲ
ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳ ದಾಂಧಲೆ | ಕೃಷಿ ಹಾನಿ
December 3, 2024
7:04 AM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರ ಸರ್ವತೋಮುಖ ಅಭಿವೃದ್ಧಿಗೆ ಶಿಬಿರ
December 3, 2024
7:02 AM
by: ದ ರೂರಲ್ ಮಿರರ್.ಕಾಂ
ಲೋಕಾಯುಕ್ತಕ್ಕೆ ಸುಳ್ಳು ದೂರು ನೀಡುವ ಪ್ರಕರಣಗಳು ಹೆಚ್ಚಾಗುತ್ತಿದೆ | ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಎಚ್ಚರಿಕೆ
December 3, 2024
6:59 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror