ಮಳೆಹಾನಿ ಪರಿಹಾರದ ಹಣ ಖಾಸಗಿ ಬ್ಯಾಂಕ್ ಖಾತೆಗೆ : ಇಇ ಶ್ರೀಕಂಠಯ್ಯ ಅಮಾನತು

November 7, 2019
1:23 PM

ಮಡಿಕೇರಿ: ಪ್ರಕೃತಿ ವಿಕೋಪದ ಪರಿಹಾರ ಕಾಮಗಾರಿಗಳಿಗೆ ಬಿಡುಗಡೆ ಮಾಡಲಾದ 21 ಕೋಟಿ ರೂ. ಅನುದಾನವನ್ನು ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಅವರು ಖಾಸಗಿ ಬ್ಯಾಂಕ್ ಖಾತೆಯಲ್ಲಿಟ್ಟಿರುವ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಆರೋಪ ಸಾಬೀತಾಗಿದೆ. ರಾಜ್ಯ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರುಗಳು ಇಂಜಿನಿಯರನ್ನು ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ.

ಶ್ರೀಕಂಠಯ್ಯ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಅವರು ಅ.9ರಂದು ಸರಕಾರದ ಮುಖ್ಯ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದರು. ಜಿ.ಪಂ ಪಂಚಾಯತ್ ರಾಜ್ ಇಲಾಖೆಯ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿಗಳಿಗೆ ಸರಕಾರದಿಂದ ಒಟ್ಟು 28 ರೂ. ಬಿಡುಗಡೆಯಾಗಿತ್ತು. ಈ ಪೈಕಿ 21 ಕೋಟಿ ರೂ.ಗಳ ಚೆಕ್ ಅನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲಾ ಪಂಚಾಯಿತಿ ಪಂಚಾಯತ್ ರಾಜ್ ಇಲಾಖೆಗೆ ಹಸ್ತಾಂತರಿಸಿ, ಪ್ರತ್ಯೇಕ ಖಾತೆಯಲ್ಲಿ ಈ ಹಣವನ್ನು ಜಮೆ ಮಾಡುವಂತೆ ಸೂಚಿಸಿದ್ದರು. ಈ ಸಂದರ್ಭ ಇಇ ಶ್ರೀಕಂಠಯ್ಯ ಅವರು ಖೋಟಕ್ ಮಹೇಂದ್ರ ಬ್ಯಾಂಕ್‍ನಲ್ಲಿ ಖಾತೆ 21 ಕೋಟಿ ರೂ.ಗಳನ್ನು ಜಮೆ ಮಾಡಿದ್ದರು. ಈ ಹಣವನ್ನು ವಿವಿಧ ಕಾಮಗಾರಿಗಳಿಗೆ ಬಳಕೆ ಮಾಡಲಾಗಿದ್ದು, ಬ್ಯಾಂಕ್ ಖಾತೆಯಲ್ಲಿ 21 ಲಕ್ಷ ರೂ.ಗಳು ಮಾತ್ರ ಉಳಿದಿದೆ ಎಂದು ತಿಳಿದು ಬಂದಿದೆ.

ಖಾಸಗಿ ಬ್ಯಾಂಕ್‍ನಲ್ಲಿ ಖಾತೆ ತೆರೆದು ಅಲ್ಲಿ ಹಣ ಜಮೆ ಮಾಡುವುದಾದರೆ ಅದಕ್ಕೆ ಹಣಕಾಸು ಇಲಾಖೆ ಮತ್ತು ಜಿಲ್ಲಾಡಳಿತದ ಆಡಳಿತಾತ್ಮಕ ಅನುಮತಿ ಮತ್ತು ಅನುಮೋದನೆ ಪಡೆಯಬೇಕಿದೆ. ಆದರೆ ಇಇ ಶ್ರೀಕಂಠಯ್ಯ, ಜಿಲ್ಲಾಡಳಿತ ಮತ್ತು ಹಣಕಾಸು ಇಲಾಖೆಯ ಯಾವುದೇ ಅನುಮತಿ ಪಡೆಯದೇ ನಿಯಮವನ್ನು ಉಲ್ಲಂಘಿಸಿದ್ದರು. ಈ ಹಿಂದೆ ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಈ ಕುರಿತು ಜಿ.ಪಂ. ಸದಸ್ಯ ಶಿವು ಮಾದಪ್ಪ ಅವರು ಈ ವಿಷಯ ಪ್ರಸ್ತಾಪಿಸಿ, ತನಿಖೆಗೆ ಒತ್ತಾಯಿಸಿದ್ದರು. ಇದಕ್ಕೆ ಪಕ್ಷಾತೀತ ಬೆಂಬಲ ವ್ಯಕ್ತವಾದ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಲಕ್ಷ್ಮೀಪ್ರಿಯ ಅವರು ಮುಖ್ಯ ಲೆಕ್ಕಾಧಿಕಾರಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ತನಿಖೆಯ ಸಂದರ್ಭ ಅಧಿಕಾರಿ ಶ್ರೀಕಂಠಯ್ಯ, ಖಾಸಗಿ ವಲಯದ ಖೋಟಕ್ ಮಹೇಂದ್ರ ಬ್ಯಾಂಕಿನಲ್ಲಿ ಒಟ್ಟು 21 ಕೋಟಿ ರೂ.ಗಳನ್ನು ಜಮೆ ಮಾಡಿರುವುದು ಕಂಡು ಬಂದಿತ್ತು. ಮಾತ್ರವಲ್ಲದೇ, ಇದಕ್ಕೆ ಜಿಲ್ಲಾಡಳಿತ ಮತ್ತು ಹಣಕಾಸು ಇಲಾಖೆಯ ಅನುಮತಿ ಪಡೆಯದಿರುವುದು ಪತ್ತೆಯಾಗಿ ಸದಸ್ಯರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ ಪರಿಹಾರ ಹಣವನ್ನು ಖಾಸಗಿ ಬ್ಯಾಂಕ್‍ನಲ್ಲಿ ಜಮೆ ಮಾಡುವುದಾರೆ ಅದಕ್ಕೆ ಆಡಳಿತಾತ್ಮಕ ಅನುಮೋದನೆ ಪಡೆಯಬೇಕಿರುತ್ತದೆ. ಆದರೆ ಇಇ ಶ್ರೀಕಂಠಯ್ಯ ಅವರು ಈ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಜಿಲ್ಲಾ ಪಂಚಾಯಿತಿ ಸಭೆಯಲ್ಲೂ ಚರ್ಚೆ ನಡೆದು ತನಿಖೆ ಮಾಡುವಂತೆ ಒತ್ತಾಯ ಕೇಳಿ ಬಂದಿತ್ತು. ತನಿಖೆಯಲ್ಲಿ ಅಧಿಕಾರಿ ತಪ್ಪೆಸಗಿರುವುದು ಪತ್ತೆಯಾಗಿದೆ. ಅವರ ವಿರುದ್ದ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ವರದಿ ನೀಡಲಾಗಿದೆ. ಸರಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror