ಮಳೆಹಾನಿ ಹಿನ್ನೆಲೆ : ಕೊಡಗಿನಲ್ಲಿ ಸರಳ ಗಣೇಶೋತ್ಸವ ಆಚರಣೆ

September 2, 2019
10:00 AM

ಮಡಿಕೇರಿ: ಪ್ರಸ್ತುತ ವರ್ಷ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆಯ ಪ್ರವಾಹದ ಸಂಕಷ್ಟವನ್ನು ಎದುರಿಸುತ್ತಿರುವ ಕೊಡಗು ಜಿಲ್ಲೆಯಲ್ಲಿ ಸಾಂಪ್ರದಾಯಿಕ ಗಣೇಶೋತ್ಸವಕ್ಕೆ ಸಿದ್ಧತೆ ಪೂರ್ಣಗೊಂಡಿದೆ.

ಜಿಲ್ಲೆಯಾದ್ಯಂತ ವಿವಿಧ ಗಣೇಶೋತ್ಸವ ಸಮಿತಿಗಳು 400 ಕ್ಕೂ ಹೆಚ್ಚು ಭಾಗಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಮಡಿಕೇರಿಯ ಕೋಟೆ ಶ್ರೀಮಹಾಗಣಪತಿ ದೇವಾಲಯದಲ್ಲಿ ಸೋಮವಾರ ಬೆಳಗ್ಗಿನಿಂದಲೇ ಅಭಿಷೇಕ, ಅಲಂಕಾರ, ಅರ್ಚನೆ, ಹೋಮ ಹವನಾದಿ ವಿಶೇಷ ಪೂಜೆಗಳು ನಡೆಯಲಿವೆ. ಭಕ್ತರು ಸಾವಿರಾರು ಈಡುಗಾಯಿ ಸೇವೆಯನ್ನು ಮಹಾಗಣಪತಿಗೆ ಅರ್ಪಿಸಲಿದ್ದಾರೆ.

ಉಳಿದಂತೆ ನಗರದ ಹೊಸ ಬಡಾವಣೆಯ ಪ್ರಸನ್ನ ಗಣಪತಿ ದೇವಾಲಯ, ದೇಚೂರು ಶ್ರೀವಿದ್ಯಾಗಣಪತಿ, ಕನ್ನಂಡಬಾಣೆಯ ದೃಷ್ಟಿ ಗಣಪತಿ, ಕಾಲೇಜು ರಸ್ತೆಯ ವಿಜಯವಿನಾಯಕ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಗಣೇಶನ ಆರಾಧನೆ ನಡೆಯಲಿದೆ.ನಗರದಲ್ಲಿ 25 ಕ್ಕೂ ಹೆಚ್ಚಿನ ಗಣೇಶೋತ್ಸವ ಸಮಿತಿಗಳು ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜಿಸಲಿವೆ. ಪ್ರತಿಷ್ಠಾಪನೆ ಮತ್ತು ವಿಸರ್ಜನೆಯ ಸಂದರ್ಭ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಈಗಾಗಲೇ ನಗರ ಠಾಣಾ ಪೊಲೀಸರು ಸೂಕ್ತ ಸಲಹೆ, ಸೂಚನೆ ನೀಡಿದ್ದಾರೆ.

ಗಣೇಶೋತ್ಸವವನ್ನು ಪ್ರತಿವರ್ಷ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದ ವಿರಾಜಪೇಟೆಯಲ್ಲಿ ಈ ಬಾರಿ ಮಹಾಮಳೆಯಿಂದ ಸಾವು, ನೋವುಗಳು ಸಂಭವಿಸಿರುವುದರಿಂದ ಸರಳ ಆಚರಣೆಗೆ ಸಮಿತಿಗಳು ಸಿದ್ಧತೆ ಮಾಡಿಕೊಂಡಿವೆ. ಸೋಮವಾರಪೇಟೆಯಲ್ಲಿ ಹೊನ್ನಮ್ಮನ ಕೆರೆಗೆ ಬಾಗಿನ ಅರ್ಪಿಸುವುದರೊಂದಿಗೆ ಗಣೇಶೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಲಾಗುತ್ತಿದೆ.

ಕುಶಾಲನಗರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಗಣಪತಿ ದೇವಾಲಯದಲ್ಲೂ ಗೌರಿ, ಗಣೇಶೋತ್ಸವ ವಿಶೇಷ ಪೂಜೆಗಳೊಂದಿಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಈ ಬಾರಿ ಪರಿಸರ ಸ್ನೇಹಿ ಗಣಪನ ಮೂರ್ತಿಗಳಿಗೆ ಆದ್ಯತೆ ನೀಡಿರುವುದು ವಿಶೇಷ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror