ಸುಳ್ಯ: ಮಳೆಯ ಕೊರತೆಯಿಂದ ಶಾಲೆಗಳಲ್ಲಿ ನೀರಿಲ್ಲ ಎಂಬ ಕಾರಣದಿಂದ ಶಾಲಾ ಪ್ರಾರಂಭೋತ್ಸವ ಮುಂದೂಡುವುದಿಲ್ಲ ಎಂದು ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ. ಪೂರ್ವನಿಗದಿಯಂತೆಯೇ ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ನೀರಿನ ಕೊರತೆ ಇರುವ ಕಡೆಗಳಲ್ಲಿ ಸ್ಥಳೀಯ ಪಂಚಾಯತ್ ಶಾಲೆಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು ಎಂದು ಇತ್ತೀಚೆಗೆ ನಡೆದ ತಾಪಂ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಹೀಗಾಗಿ ನೀರಿನ ಕೊರತೆ ಇರುವ ಶಾಲೆಗಳ ಪ್ರಮುಖರು ಸ್ಥಳೀಯ ಪಂಚಾಯತ್ ಗೆ ಮಾಹಿತಿ ನೀಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಸುಳ್ಯ ನಗರದಲ್ಲಿ ಚುನಾವಣೆಯ ಕಾರಣದಿಂದ ಒಂದು ದಿನ ವಿಳಂಬವಾಗುವ ಸಾಧ್ಯತೆ ಇದೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮಳೆ ಇಲ್ಲ…. ಶಾಲೆಗೆ ರಜೆ ಮುಂದುವರಿಕೆ ಇಲ್ಲ"