ಮಳೆ ಬಂದರೆ ಮಂಗಳೂರು-ಬೆಂಗಳೂರು ರೈಲಿಗೂ ತಪ್ಪದ ಸಂಕಷ್ಟ

July 24, 2019
8:00 AM

ಮಲೆನಾಡು, ಪಶ್ಚಿಮಘಟ್ಟದಲ್ಲಿ ನಿರಂತರ ಮಳೆ ಸುರಿದರೆ ರೈಲು ಸಂಚಾರಕ್ಕೆ ಸಂಕಷ್ಟವಾಗುತ್ತದೆ. ಗುಡ್ಡ ಕುಸಿತ, ಬಂಡೆ ಕಲ್ಲು ಉರುಳಿ ಹಳಿಯ ಮೇಲೆ ಬೀಳುವ ಕಾರಣ ರೈಲು ಸಂಚಾರಕ್ಕೆ ಅಡ್ಡಿಯಾಗುತ್ತದೆ. ಇದೀಗ ಮಂಗಳೂರು-ಬೆಂಗಳೂರು ರೈಲು ಸಂಚಾರವೂ ಅದೇ ಹಾದಿಯಲ್ಲಿದೆ. ಈಚೆಗೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಇದೀಗ ಬಂಡೆ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ.

Advertisement

 

ಘಟ್ಟ ಪ್ರದೇಶದಲ್ಲಿ ಆಗಾಗ ಭಾರೀ ಮಳೆಯಾಗುತ್ತದೆ. ಕೆಲವೊಮ್ಮೆ ಕಡಿಮೆ ಎನಿಸಿದರೂ ಮಣ್ಣು ಸಡಿಲಗೊಂಡು ಗೂಡ್ಸ್ ರೈಲು ಹಾಗೂ ಪ್ರಯಾಣಿಕ ರೈಲು ಸಾಗುವ ಮಂಗಳೂರು-ಬೆಂಗಳೂರು ರೈಲು ಹಳಿಯಲ್ಲಿ  ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ವರೆಗಿನ ರೈಲು ಮಾರ್ಗದ ಮೇಲೆ ಮಣ್ಣು ಕುಸಿತವಾಗುತ್ತದೆ. ಹೀಗಾಗಿ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ.  ಸುರಿಯವ ಮಳೆಯ ಕಾರಣದಿಂದ ಬಂಡೆ ಕಲ್ಲುಗಳು ಕೂಡಾ ಜಾರಿ ಹಳಿಯ ಮೇಲೆ ಬೀಳುತ್ತವೆ. ಈಗ ಅಂತಹ ಕಲ್ಲುಗಳ ತೆರವು ಕಾರ್ಯ ನಡೆಯುತ್ತಿದೆ. ಬುಧವಾರ ಸಂಜೆ ಪೂರ್ಣಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.

ಸುಬ್ರಹ್ಮಣ್ಯ ರಸ್ತೆ-ಸಿರಿಬಾಗಿಲು ನಡುವಣ ರೈಲು ಹಳಿಯ ಮೇಲೆ ಉರುಳಲು ಸಿದ್ಧವಾಗಿದ್ದ ಬಂಡೆಯನ್ನು ತೆರವುಗೊಳಿಸುವ ಕಾರ್ಯ ಶನಿವಾರ ಆರಂಭವಾಗಿತ್ತು. ಸ್ಫೋಟಕಗಳನ್ನು ಇರಿಸಿ ಬಂಡೆಯನ್ನು ಸಿಡಿಸುವ ಕಾಮಗಾರಿ ನಡೆಸುವ ಕಾರಣ ಗುಡ್ಡದಲ್ಲಿ ಕಂಪನ ಉಂಟಾಗಿ ಕಲ್ಲಿನ ಪರಿಸರದ ಮಣ್ಣು ಕೂಡಾ ಹಳಿಯ ಮೇಲೆ ಉರುಳಿ ಬಿದ್ದಿತ್ತು. ಮಳೆಯ ಕಾರಣದಿಂದಾಗಿ ಸಡಿಲಗೊಂಡ ಗುಡ್ಡೆಯ ಮಣ್ಣು ಮತ್ತೆ ಮತ್ತೆ ಕುಸಿಯುತ್ತಿರುವುದು ಕಾಮಗಾರಿಗೆ ಅಡ್ಡಿಯಾಯಿತು. ಆದರೂ 60ಕ್ಕೂ ಹೆಚ್ಚು ಕಾರ್ಮಿಕರು ಮತ್ತು ತಂತ್ರಜ್ಞರು ಜೆಸಿಬಿ, ಹಿಟಾಚಿಗಳ ಮೂಲಕ ತೆರವು ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ.

ಎರಡು ವಾರಗಳ ಹಿಂದೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ತೆರಳಿದ್ದರು. ಬಳಿಕ ಬಂಡೆ ಕಲ್ಲುಗಳನ್ನು  ತೆರವು ಮಾಡುವ ಬಗ್ಗೆ ಚಿಂತನೆ ನಡೆಸಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
July 19, 2025
8:56 PM
by: ದ ರೂರಲ್ ಮಿರರ್.ಕಾಂ
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group