ಸುಳ್ಯ: ಮೆ.29ರಂದು ನಡೆಯುವ ನಗರ ಪಂಚಾಯತ್ ಚುನಾವಣೆಗೆ ಮಸ್ಟರಿಂಗ್ ಕೇಂದ್ರವಾದ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಿದ್ಧತೆ ಆರಂಭಗೊಂಡಿದೆ. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಚುನಾವಣಾಧಿಕಾರಿಗಳಾದ ದೇವರಾಜ್ ಮುತ್ಲಾಜೆ, ಎನ್.ಮಂಜುನಾಥ್ ಮತ್ತು ಚುನಾವಣಾ ಕರ್ತವ್ಯಕ್ಕೆ ತೆರಳುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಗಮಿಸಿದ್ದಾರೆ.
ಮತಗಟ್ಟೆಗೆ ತೆರಳುವ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಇವಿಎಂ ಮತ್ತಿತರ ಸಾಮಾಗ್ರಿಗಳನ್ನು ವಿತರಿಸಲಾಗುವುದು. ಮಧ್ಯಾಹ್ನದ ಬಳಿಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತಗಟ್ಟೆಗಳತ್ತ ತೆರಳಲಿದ್ದಾರೆ.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕಲೆ, ಸಾಹಿತ್ಯ, ಧಾರ್ಮಿಕ, ಕೃಷಿ, ವಿಶೇಷ ಲೇಖನ , ಅಂಕಣ, ವಿಶೇಷ ವರದಿಗಳು , ರಾಜಕೀಯ ವಿಶ್ಲೇಷಣೆ, ದಿನದ ಫೋಕಸ್ ಸ್ಟೋರಿ, ದಿನದ ಚಿತ್ರ, ವಾರದ ವ್ಯಕ್ತಿ , ಜಿಲ್ಲೆ, ರಾಜ್ಯ, ರಾಷ್ಟ್ರೀಯ ಪ್ರಮುಖ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮಸ್ಟರಿಂಗ್ ಕೇಂದ್ರದಲ್ಲಿ ಚುನಾವಣಾ ಸಿದ್ದತೆ ಆರಂಭ"