ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

November 28, 2019
10:26 PM

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನೆ ಮುಖಂಡ ಉದ್ಧವ್​ ಠಾಕ್ರೆ ನ.28 ರಂದು ಪ್ರಮಾಣವಚನ ಸ್ವೀಕರಿಸಿದರು. ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಪ್ರತಿಜ್ಞಾವಿಧಿ ಬೋಧಿಸಿದರು.

ಇದೇ ಸಂದರ್ಭ ಏಕನಾಥ್ ಸಂಭಾಜಿ ಶಿಂಧೆ, ಸುಭಾಷ್ ರಾಜಾರಾಂ ದೇಸಾಯಿ, ಬಾಳಾಸಾಹೇಬ್ ಥೋರಟ್, ನಿತಿನ್ ರಾವತ್, ಜಯಂತ್ ಪಾಟೀಲ್, ಛಗನ್ ಭುಜಬಲ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ದಕ್ಷಿಣ ಮುಂಬೈನ ಶಿವಾಜಿ ಪಾರ್ಕ್​​ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಉದ್ಧವ್​ ಠಾಕ್ರೆ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಬಾಳಾ ಠಾಕ್ರೆ ಕುಟುಂಬದ ಮೊದಲ ಮುಖ್ಯಮಂತ್ರಿಯಾಗಿರುವ ಉದ್ಧವ್​ ಠಾಕ್ರೆ ಪ್ರಮಾಣವಚನ ಸ್ವೀಕಾರಕ್ಕಾಗಿ ಶಿವಾಜಿ ಪಾರ್ಕ್​ ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು.
ಸಮಾರಂಭದಲ್ಲಿ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಎಂಎನ್​ಎಸ್​ ಮುಖ್ಯಸ್ಥ ರಾಜ್​ ಠಾಕ್ರೆ, ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್​, ಡಿಎಂಕೆ ನಾಯಕ ಟಿ.ಆರ್​.ಬಾಲು, ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್, ಎನ್​ಸಿಪಿ ಮುಖಂಡ ಪ್ರಫುಲ್​ ಪಟೇಲ್,​ ಉದ್ಯಮಿ ಮುಕೇಶ್​ ಅಂಬಾನಿ ಹಾಗೂ ಅವರ ಪತ್ನಿ ಸೇರಿ ಸೇರಿ ಅನೇಕರು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!
March 4, 2026
10:20 PM
by: ಮಿರರ್‌ ಡೆಸ್ಕ್
ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror