ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ- ಮತದಾನ ಆರಂಭ

October 21, 2019
9:18 AM

ನವದೆಹಲಿ: ಹರಿಯಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದೆ. ಬೆಳಗ್ಗೆ ಏಳು ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ ಆರು ಗಂಟೆವರೆಗೂ ನಡೆಯಲಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗಳತ್ತ ಸಾಗುತ್ತಿದ್ದಾರೆ.

ಮಹಾರಾಷ್ಟ್ರದ 288 ವಿಧಾನಸಭೆ ಸ್ಥಾನಗಳು, ಹಾಗೂ ಹರಿಯಾಣದ 90 ಸ್ಥಾನಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಮೈತ್ರಿ ಮಾಡಿಕೊಂಡಿದ್ದು, 150 ಸ್ಥಾನಗಳಲ್ಲಿ ಬಿಜೆಪಿ ಹಾಗೂ 124 ಸ್ಥಾನಗಳಲ್ಲಿ ಶಿವಸೇನೆ ಸ್ಪರ್ಧಿಸುತ್ತಿವೆ. ಕಾಂಗ್ರೆಸ್​ ಹಾಗೂ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್​ ಕಾಂಗ್ರೆಸ್​​ ಪಾರ್ಟಿಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡು ಸ್ಪರ್ಧೆಗಿಳಿದಿವೆ. ಮಹಾರಾಷ್ಟ್ರದಲ್ಲಿ ಅಂದಾಜು 8.9 ಕೋಟಿ ಮಂದಿ ಮತದಾನ ಮಾಡಲಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್​​, ಬಿಜೆಪಿ, ಇಂಡಿಯನ್ ನ್ಯಾಷನಲ್ ಲೋಕದಳ್ ಮತ್ತು ಜನ್ನಾಯಕ್ ಜನತಾ ಪಾರ್ಟಿ(ಜೆಜೆಪಿ) ನಡುವೆ ತುರುಸಿನ ಸ್ಪರ್ಧೆ ಏರ್ಪಟ್ಟಿದೆ. 1169 ಮಂದಿ ಕಣದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ
October 19, 2026
4:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-10-2026 | ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಲಕ್ಷಣ
October 19, 2026
3:45 PM
by: ದ ರೂರಲ್ ಮಿರರ್.ಕಾಂ
ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror