ಮಿತ್ತಡ್ಕ : ಶಾಲೆಗೆ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದಿಂದ ಬರಹ ಪುಸ್ತಕ ಕೊಡುಗೆ

June 22, 2019
7:52 PM

ಸುಬ್ರಹ್ಮಣ್ಯ : ಶಿಕ್ಷಣವು ಇಂದು ಎಲ್ಲರಿಗೂ ಸಿಗುತ್ತಿದೆ. ಶಿಕ್ಷಣ ಎನ್ನುವುದು ಅಂಕ ಮತ್ತು ಉದ್ಯೋಗ ಪಡೆಯುವ ಏಕ ಉದ್ದೇಶ ಹೊಂದಿರಬಾರದು. ಜೀವನ ಪಾಠ ಅಗತ್ಯವಿದ್ದು ಅಂತಹ ಬೋಧನೆಗಳು ಮಕ್ಕಳಿಗೆ ದೊರಕಬೇಕು ಎಂದು ಸುಬ್ರಹ್ಮಣ್ಯ ಸಂಪುಟ ನರಸಿಂಹ   ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿತ್ತಡ್ಕ ಮರ್ಕಂಜ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಮಠದಿಂದ ನೀಡಲಾದ ಉಚಿತ ಪುಸ್ತಕವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ ಅದೇ ಶಿಕ್ಷಣಕ್ಕೆ ಪ್ರೋತ್ಸಾಹ ಕೊಟ್ಟಾಗ ಅದು ಅವರ ಬದುಕಿಗೆ ಉತ್ತಮ ಪರಿಣಾಮಗಳನ್ನು ತಂದುಕೊಡುತ್ತದೆ ಎಂದವರು ಹೇಳಿದರು. ವಿದ್ಯಾರ್ಥಿಗಳು ಹಾಗೂ ಪೋಷಕರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಹರೀಶ್ ಹಲ್ದಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬರಹ ಪುಸ್ತಕ ಕೊಡುಗೆ ನೀಡಿದ ಸುದರ್ಶನ ಜೋಯಿಷ ಅವರನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಸಂಸ್ಥೆಯಿಂದ ಸಮ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಗ್ರಾ.ಪಂ ಸದಸ್ಯೆ ನಮಿನ ಮಿತ್ತಡ್ಕ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷತೆ ಜಯಂತಿ ಹೈದಂಗೂರು, ಮುಖ್ಯ ಶಿಕ್ಷಕಿ ಹೇಮಾವತಿ, ಪೋಷಕ ಪ್ರತಿನಿಧಿ ನಿತ್ಯಾನಂದ ಭೀಮಗುಳಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ
March 31, 2026
6:47 AM
by: ಮಿರರ್‌ ಡೆಸ್ಕ್
“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ
March 31, 2026
6:31 AM
by: ದ ರೂರಲ್ ಮಿರರ್.ಕಾಂ
‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror