ಮಂಗಳೂರು : ಮುಜರಾಯಿ ಇಲಾಖೆಯ ದೇವಸ್ಥಾನದಲ್ಲಿ ಕೆಲಸ ಮಾಡುವ ಸಿಬಂದಿಗಳಿಗೆ ರಾಜ್ಯ ಸರಕಾರ ಗಿಫ್ಟ್ ನೀಡಿದೆ. ಈ ಬಗ್ಗೆ ಮಂಗಳೂರಿನಲ್ಲಿ ಹೇಳಿಕೆ ನೀಡಿರುವ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ , ಮುಜರಾಯಿ ಇಲಾಖಾ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಾಲಯಗಳಲ್ಲಿ ಕೆಲಸ ಮಾಡುವ ಎಲ್ಲಾ ದರ್ಜೆಯ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಹೇಳಿದ್ದಾರೆ.
ಅರ್ಚಕರ ಮನವಿಗೆ ಸ್ಪಂದಿಸಿ ಮುಂದಿನ ದಿನಗಳಲ್ಲಿ ಐದು ಲಕ್ಷ ರೂ. ಮೊತ್ತದ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ. ಮೊತ್ತದ ಜೀವ ವಿಮೆ ನೀಡಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 34 ಸಾವಿರ ದೇವಸ್ಥಾನಗಳಲ್ಲಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಅರ್ಚಕರು ಮತ್ತು ಸಿಬ್ಬಂದಿ ಇದ್ದಾರೆ. ಇಲಾಖೆ ಹೊರತಾದ ದೇವಳಗಳಿಂದ ಮನವಿ ಬಂದರೂ ಪರಿಗಣಿಸಲಾಗುವುದು ಶೀಘ್ರದಲ್ಲೇ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel