ಪುತ್ತೂರು : ಹೆಸರಾಂತ ಚಿನ್ನದ ಮಳಿಗೆ ಮುಳಿಯ ಜ್ಯುವೆಲ್ಸ್‍ನಲ್ಲಿ ವಿಶ್ವ ಪರಿಸರ ದಿನವನ್ನು ಸಂಸ್ಥೆಗೆ ಆಗಮಿಸಿದ ಗ್ರಾಹಕರಿಗೆ ಸಂಸ್ಥೆಯ ವತಿಯಿಂದ ಗಿಡಗಳನ್ನು ನೀಡಿ, ವಿಶ್ವ ಪರಿಸರ ದಿನವನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ಮಾತನಾಡಿ ಪರಿಸರ ಜಾಗೃತಿ ನಮ್ಮೆಲ್ಲಾ ಆದ್ಯ ಕರ್ತವ್ಯ ಮುಂದಿನ ಜನಾಂಗಕ್ಕೆ ವಿದ್ಯಾಭ್ಯಾಸದ ಜೊತೆಗೆ ಬದುಕಲು ಒಳ್ಳೆಯ ಪರಿಸರವನ್ನು ಒದಗಿಸುವುದು ನಮ್ಮೆಲ್ಲರ ಉದ್ದೇಶವಾಗಿರಬೇಕು ಎಂದು ಹೇಳಿದರು.
ಸಂಸ್ಥೆಯ ಎಲ್ಲಾ 5 ಶಾಖೆಗಳಲ್ಲಿ ಗ್ರಾಹಕರಿಗೆ ಗಿಡ ನೀಡುವ ಮೂಲಕ ವಿಭಿನ್ನ ರೀತಿಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಮುಳಿಯ ಜ್ಯುವೆಲ್ಸ್ ವತಿಯಿಂದ ವಿಶ್ವ ಪರಿಸರ ದಿನ ಆಚರಣೆ"