ಮೇ.25 : ಕುಕ್ಕೆಯಲ್ಲಿ ಮಲೆಕುಡಿಯ ಸಮುದಾಯದ ಜಿಲ್ಲಾ ಸಮಾವೇಶ

Advertisement

ಸುಬ್ರಹ್ಮಣ್ಯ: ದ.ಕ ಜಿಲ್ಲಾ ಮಲೆಕುಡಿಯರ ಸಂಘದ ಜಿಲ್ಲಾ ಮಟ್ಟದ ಸಮಾವೇಶವು ಮೇ.25 ರಂದು ಶನಿವಾರ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜು ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿ.ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ  ತಿಳಿಸಿದರು.

Advertisement

ಸಮಾವೇಶದಲ್ಲಿ ಮಲೆಕುಡಿಯ ಸಮುದಾಯದವರಿಗೆ ಕಿರಿಯ ಮತ್ತು ಹಿರಿಯ ವಿಭಾಗಕ್ಕೆ ಪ್ರತ್ಯೇಕವಾಗಿ ಆಟೋಟ ಸ್ಪರ್ಧೆಗಳು ನಡೆಯಲಿವೆ. ರಾತ್ರಿ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.  ರಾತ್ರಿ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಜಿ ಉಜಿರೆ ವಹಿಸಲಿರುವರು. ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಸ್ ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ. ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಚ್. ಎಂ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಮನ್ವಯಾಧಿಕಾರಿ ಹೇಮಲಾ, ಜಿ.ಪಂ ಸದಸ್ಯೆ ಆಶಾತಿಮ್ಮಪ್ಪ, ತಾ.ಪಂ ಸದಸ್ಯ ಅಶೋಕ ನೆಕ್ರಾಜೆ, ಗ್ರಾ.ಪಂ ಅಧ್ಯಕ್ಷೆ ಸುಶೀಲಾ ಪಿ, ಮಲೆಕುಡಿಯರ ಸಂಘದ ತಾಲೂಕು ಅಧ್ಯಕ್ಷ ಪುರುಷೋತ್ತಮ ಗುಂಡ್ಯ, ಮಲೆಕುಡಿಯ ಸಂಘದ ಸುಬ್ರಹ್ಮಣ್ಯ ಗುರಿಕಾರ ಐತಪ್ಪ ಅರ್ಗುಡಿ ಉಪ್ಥಿತರಿರುವರು ಎಂದವರು ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಮೇ.25 : ಕುಕ್ಕೆಯಲ್ಲಿ ಮಲೆಕುಡಿಯ ಸಮುದಾಯದ ಜಿಲ್ಲಾ ಸಮಾವೇಶ"

Leave a comment

Your email address will not be published.


*