ಧರ್ಮಸ್ಥಳ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ 17 ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಮೇ.5 ರಂದು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ ಜೈನ್ ತಿಳಿಸಿದ್ದಾರೆ.
ಚಲನಚಿತ್ರ ಕಲಾವಿದ ಡಾ. ಮುಖ್ಯಮಂತ್ರಿ ಚಂದ್ರು ಪುರಸ್ಕಾರ ವಿತರಿಸುವರು. ಚಿತ್ರ ಕಲಾವಿದ ಗಂಜೀಫ ರಘುಪತಿ ಭಟ್ ಶುಭಾಶಂಸನೆ ಮಾಡುವರು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ರಚಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಕಳೆದ 17 ವರ್ಷಗಳಿಂದ ಈ ಸ್ಪರ್ಧೆ ನಡೆಸುತ್ತಿದ್ದು ಈ ವರೆಗೆ 2,09,685 ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಸಮಾರಂಭದ ಕೊನೆಯಲ್ಲಿ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel