ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರಕಾರವು ದ್ವೇಷದ ರಾಜಕಾರಣ ಮಾಡುತ್ತಿರುವುದನ್ನು ಖಂಡಿಸಿ ಮೇ 6ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿಲ್ಲ. ಈಗ ದೋಸ್ತಿ ಪಕ್ಷಗಳ ನಡುವಿನ ಆಂತರಿಕ ಕಚ್ಚಾಟ ಮಿತಿ ಮೀರಿದೆ. ರಾಜ್ಯ ಸರಕಾರದಲ್ಲಿ ಮಂತ್ರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ದ್ವೇಷ ರಾಜಕಾರಣದಲ್ಲಿ ನಿರತರಾಗಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈಗ ದ್ವೇಷದ ರಾಜಕಾರಣ ಹೆಚ್ಚಾಗಿದ್ದು ಬಿಜೆಪಿ ಕಾರ್ಯಕರ್ತರು ಮಾತ್ರವಲ್ಲ ಮಾಧ್ಯಮದ ವಿರುದ್ಧವೂ ಪ್ರತೀಕಾರಕ್ಕೆ ಸರಕಾರ ಮುಂದಾಗಿದೆ. ಸಚಿವ ಎಂ.ಬಿ. ಪಾಟೀಲ್ ದ್ವೇಷ ರಾಜಕಾರಣದ ಮುಂಚೂಣಿಯಲ್ಲಿ ನಿಂತಿರುವುದು ಖಂಡನೀಯ. ಹೀಗಾಗಿ ವಿರೋಧ ಪಕ್ಷಗಳನ್ನು , ಮಾಧ್ಯಮಗಳನ್ನು ಬಾಯಿಮುಚ್ಚಿಸಲು ಹೊರಟಿರುವ ಮೈತ್ರಿ ಸರ್ಕಾರದ ವಿರುದ್ಧ, ರಾಜ್ಯದ ಗೃಹ ಸಚಿವರ ದ್ವೇಷ ರಾಜಕಾರಣ ಖಂಡಿಸಿ ಮೇ.6 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement