ಮೊಗ್ರ ಶಾಲೆಯ ಮಕ್ಕಳಿಗೆ ಸೇತುವೆ ಇಲ್ಲ : ಶಿಕ್ಷಣ ಸಚಿವರಿಂದ ಸ್ಪಂದನೆ : ಈಗಲಾದರೂ ಈಡೇರೀತೇ ?

February 17, 2020
10:44 AM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಸರಕಾರಿ ಶಾಲೆಯ ಮಕ್ಕಳಿಗೆ ಹೊಳೆ ದಾಟಲು ಸೇತುವೆ ಮಾಡಿಕೊಡಿ ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ದೊಡ್ಡ ಬಜೆಟ್ ಸೇತುವೆ ಮುಂದೆ ಯಾವಾಗಲಾದರೂ ಮಾಡಿ ಸದ್ಯಕ್ಕೆ ಮಳೆಗಾಲದಲ್ಲಿ ದಾಟಲು ಕಾಲು ಸಂಕ ಅಥವಾ ತೂಗುಸೇತುವೆ ಮಾಡಿಕೊಡಿ ಎಂಬ ಬೇಡಿಕೆಯನ್ನೂ ಜನನಾಯಕರು ಪರಿಗಣಿಸಲೇ ಇಲ್ಲ. ಇದೀಗ ಇನ್ನೊಂದು ಭರವಸೆ ಮೂಡಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನಕ್ಕೆ ಈ ಶಾಲೆಯ ಸ್ಥಿತಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಶಾಲೆಯೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಕಮಿಲದ ಮಹೇಶ್ ಅವರು ಮೊಗ್ರ ಶಾಲಾ ಮಕ್ಕಳ ಸ್ಥಿತಿ ಹಾಗೂ ಸೇತುವೆ ಅಥವಾ ಕಾಲು ಸಂಕ ಆಗದೇ ಇರುವ ಬಗ್ಗೆ ಪ್ರತಿಕ್ರಿಯೆ ರೂಪದಲ್ಲಿ ಮಾಹಿತಿ ನೀಡಲಾಗಿತ್ತು. ತಕ್ಷಣವೇ ಈ ಬಗ್ಗೆ ಸಂಪರ್ಕ ಸಂಖ್ಯೆ ಪಡೆದುಕೊಂಡು ಕರೆ ಮಾಡಿ ಮಾಹಿತಿ ಪಡೆದುಕೊಂಡ ಸಚಿವ ಸುರೇಶ್ ಕುಮಾರ್ ಅವರು ಈ ಬಗ್ಗೆ ಗಮನಹರಿಸುವುದಾಗಿ ಭರವಸೆ ನೀಡಿದ್ದಾರೆ. ಶಾಲಾ ಮಕ್ಕಳಿಗೆ ಮಳೆಗಾಲ ಹೊಳೆದಾಟುವಂತೆ ಕನಿಷ್ಟ ಕಾಲುಸಂಕ  ಮಾಡಿಸುವ ಕಡೆಗೆ ಗಮನಹರಿಸಲು ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೊತೆ ಮಾತುಕತೆ ನಡೆಸುವುದಲ್ಲದೆ ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ
July 7, 2026
10:32 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ
July 7, 2026
9:35 PM
by: ದ ರೂರಲ್ ಮಿರರ್.ಕಾಂ
ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ
July 7, 2026
8:07 PM
by: ಮಿರರ್‌ ಡೆಸ್ಕ್
ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ
July 7, 2026
12:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror