ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಳಿನ್ ಕುಮಾರ್ ಕಟೀಲು ಶುಕ್ರವಾರ ವಿವಿಧ ದೇವಸ್ಥಾನ, ಮಠ ಹಾಗೂ ಧರ್ಮಾಧಿಕಾರಿಗಳನ್ನು ಭೇಟಿ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ನಳಿನ್ ಕುಮಾರ್ ಕಟೀಲು ಮೊದಲ ಬಾರಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ವೆಂಕಟ್ರಮಣ ದೇವಸ್ಥಾನ , ಕೊಕ್ಕಡ ಸೌತಡ್ಕ ದೇವಸ್ಥಾನ, ಕೊಕ್ಕಡ ವೈದ್ಯನಾಥೇಶ್ವರ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.
ಅದಾದ ಬಳಿಕ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಅದಾದ ಬಳಿಕ ಬೆಳ್ತಂಗಡಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿದರು.
ಈ ನಡುವೆ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನೂ ಭೇಟಿಯಾಗಿ ಆಶೀರ್ವಾದ ಪಡೆದರು.
ಸಂಸದರ ಜೊತೆ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಮೊದಲಾದವರು ಉಪಸ್ಥಿತರಿದ್ದರು.