ಮೋದಿ ದುರಾಡಳಿತದ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ : ಭರತ್ ಮುಂಡೋಡಿ

April 15, 2019
11:12 AM

ಸುಳ್ಯ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮನೆ-ಮನೆ ಭೇಟಿ ನೀಡುವ ವೇಳೆ ಮೋದಿ ಸರಕಾರದ ದುರಾಡಳಿತ ಬಗ್ಗೆ ಸ್ವತಃ ಜನರೇ ಮಾತನಾಡುತ್ತಿದ್ದಾರೆ. ಇಂತಹ ಜನವಿರೋಧಿ ಆಡಳಿತವನ್ನು ಕಿತ್ತೊಗೆಯಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಈ ಬಾರಿ ಮೋದಿ ಸರಕಾರ ಪತನಗೊಳ್ಳುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೋಟು ಬ್ಯಾನ್, ಜಿಎಸ್‍ಟಿ ಜಾರಿಯಿಂದ ಬಡವರು ಬೀದಿಗೆ ಬೀಳುವ ಸ್ಥಿತಿ ಉಂಟಾಗಿದೆ. ಇದೇ ವಿಚಾರವಾಗಿ ಜನರು ಅಸಹನೆ ವ್ಯಕ್ತಪಡಿಸಿದ್ದಾರೆ. ಪ್ರಚಾರದ ಸಂದರ್ಭ ಕಾಂಗ್ರೆಸ್ ಪರ ಸ್ಪಂದನೆ ದೊರೆತಿದೆ. ಹೀಗಾಗಿ ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಭರ್ಜರಿ ಗೆಲುವು ದಾಖಲಿಸಲಿದ್ದಾರೆ ಎಂದು ಅವರು ಹೇಳಿದರು.
ನಳಿನ್ ಕುಮಾರ್ ಕಟೀಲು ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ಒದಗಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಎಸ್‍ಎನ್‍ಎಲ್ ದುಸ್ಥಿತಿ ಅದಕ್ಕೆ ಒಂದು ಉದಾಹರಣೆ. ಈ ಬಾರಿ ಲೋಕಸಭೆಯಲ್ಲಿ ಧ್ವನಿ ಎತ್ತಬಲ್ಲ ಸಮರ್ಥ ಅಭ್ಯರ್ಥಿ ಮಿಥುನ್ ರೈ ಅವರನ್ನು ಗೆಲ್ಲಿಸಲು ಜನರು ತೀರ್ಮಾನಿಸಿದ್ದಾರೆ ಎಂದರು ಅವರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಮಾತನಾಡಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರು ಯಾರೆಂದು ಗೊತ್ತಿದ್ದರೂ, ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ, ಈ ಪಕ್ಷದ ಧೋರಣೆ, ಭ್ರಷ್ಟಚಾರವನ್ನು ಸಮರ್ಥಿಸುವ ಮನೋಭಾವನೆಗೆ ಉದಾಹರಣೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಕೆಪಿಸಿಸಿ ಸದಸ್ಯ ಡಾ.ರಘು, ಎಸ್.ಸಂಶುದ್ದೀನ್, ಗೋಕುಲ್‍ದಾಸ್ ಕೆ, ಜೆಡಿಎಸ್ ಮುಖಂಡ ಜಾಕೆ ಮಾಧವ ಗೌಡ, ಜೂಲಿಯಾನ ಕ್ರಾಸ್ತ, ಓವಿನ್ ಪಿಂಟೋ, ಬೀರಾ ಮೊೈದೀನ್, ವಿನೂಪ್ ಮಲ್ಲಾರ, ಸತೀಶ್ ಕೆ, ಭವಾನಿಶಂಕರ ಕಲ್ಮಡ್ಕ ಮೊದಲಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror