ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

Advertisement

ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ

Advertisement

ಮೂಡಿಗೆರೆ: ಭಾರತೀಯ ಸೈನಿಕರ ಸಾಧನೆಯನ್ನು ಚುನಾವಣೆಯ ಅಸ್ತ್ರವನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ದಿಕ್ಕು ತಪ್ಪಿಸುವ ಯತ್ನ ನಡೆಸುತ್ತಿದ್ದು ಇದರಿಂದಲೇ ಬಿಜೆಪಿಯ ಪಥನದ ಹಾದಿ ಪ್ರಾರಂಭವಾಗುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೈತ್ರಿ ಪಕ್ಷದ ಅಭ್ಯರ್ಥಿಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

Advertisement
Advertisement

‘ಸ್ವಾತಂತ್ರ್ಯದ ಬಳಿಕ ದೇಶಕ್ಕೆ ಕಾಡದ ಅಭದ್ರತೆಯು, ಕಳೆದ ಐದು ವರ್ಷಗಳಿಂದ ಕಾಡ ತೊಡಗಿದೆ. ಚುನಾವಣೆಯಲ್ಲಿ ವಾಮ ಮಾರ್ಗವನ್ನು ಅನುಸರಿಸುವ ಯತ್ನವನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ನಾನು ಮುಖ್ಯಮಂತ್ರಿಯಾಗಿ ರೈತರ ಸಾಲಮನ್ನಾ ಮಾಡುವ ಘೋಷಣೆ ಹೊರಡಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ವಿರೋಧ ವ್ಯಕ್ತಪಡಿಸಿದ್ದರು. ಆದರೆ, ನಾನು ಯಾವುದನ್ನೂ ಲೆಕ್ಕಿಸದೇ ಸಾಲಮನ್ನಾವನ್ನು ಜಾರಿಗೊಳಿಸಿದೆ. ರೈತರು ಹಾಗೂ ಕಾಫಿ ಬೆಳೆಗಾರರ ಸಮಸ್ಯೆಯನ್ನು ಬಿಜೆಪಿಯಾಗಲೀ, ನರೇಂದ್ರ ಮೋದಿಯಾಗಲೀ ಎಂದಿಗೂ ಆಲಿಸಿಲ್ಲ. ರಾಜ್ಯ ಸರ್ಕಾರ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರ ಪರ ಮಾಡಿದ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ’ ಎಂದು ದೂರಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ.ಜಯಮಾಲಾ ಮಾತನಾಡಿ, ‘ಸಂಸದೆ ಶೋಭಾ ಕರಂದ್ಲಾಜೆ ಅವರು 5 ವರ್ಷದಲ್ಲಿ ಕ್ಷೇತ್ರದತ್ತ ತಲೆ ಹಾಕಿರಲಿಲ್ಲ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಬೆಳೆಗಾರರ ಹಾಗೂ ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಅಥವಾ ಬೇರೆಲ್ಲಿಯೂ ಚಕಾರವೆತ್ತಲಿಲ್ಲ. ರಾಜ್ಯ ಸರ್ಕಾರ ಮಾಡಿದ ಉತ್ತಮ ಕೆಲಸಕ್ಕೆ ವಿರೋಧ ವ್ಯಕ್ತಪಡಿಸಿ ಈಗ ಸ್ವ ಪಕ್ಷೀಯರಿಂದಲೇ ಗೋಬ್ಯಾಕ್ ಚಳವಳಿಗೆ ತುತ್ತಾಗಿದ್ದಾರೆ. ಇಂತಹ ಸಂಸದೆಯನ್ನು ಬಿಜೆಪಿಯವರ ಚಳವಳಿಯಂತೆ ಮನೆಗೆ ಕಳುಹಿಸಬೇಕು’ ಎಂದು ಮನವಿ ಮಾಡಿದರು.

Advertisement

ಮಾಜಿ ಸಚಿವೆ ಮೋಟಮ್ಮ, ಮಾಜಿ ಸಭಾಪತಿ ಬಿ.ಎಲ್.ಶಂಕರ್, ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಮೋದಿ ಸೈನಿಕರ ಸಾಧನೆಯನ್ನು ಚುನಾವಣೆ ಅಸ್ತ್ರವಾಗಿಸಿ, ಜನರ ದಿಕ್ಕು ತಪ್ಪಿಸುತ್ತಿದ್ದಾರೆ – ಕುಮಾರಸ್ವಾಮಿ"

Leave a comment

Your email address will not be published.


*