ರಾಜ್ಯದಲ್ಲಿ ಒಂದೇ ದಿನ 53 ಕೊರೊನಾ ಪಾಸಿಟಿವ್ | ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847 ಕ್ಕೆ ಏರಿಕೆ |

May 10, 2020
1:16 PM

ಬೆಂಗಳೂರು: ರಾಜ್ಯದಲ್ಲಿ  ಭಾನುವಾರ ಬೆಳಗ್ಗೆಯವರೆಗೆ ಅಂದರೆ 24 ಗಂಟೆಯಲ್ಲಿ 53 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ  ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೇವಲ ಅರ್ಧ ದಿನದಲ್ಲಿ 53 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇದು ರಾಜ್ಯದಲ್ಲಿ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣವಾಗಿದೆ. ಇಲ್ಲಿಯವರೆಗೆ 32 ಜನರು ಮೃತಪಟ್ಟಿದ್ದು, 405 ಮಂದಿ ಗುಣಮುಖರಾಗಿದ್ದಾರೆ.

ಹಸಿರು ವಲಯ ಶಿವಮೊಗ್ಗದಲ್ಲಿ 8 ಸೋಂಕಿತ ಪ್ರಕರಣಗಳು ದಾಖಲಾಗಿದೆ . ಅಹಮದಾಬಾದ್‌ಗೆ ಭೇಟಿ ನೀಡಿದ್ದ ಜನರಿಗೆ ಶಿವಮೊಗ್ಗದಲ್ಲಿ  ಸೋಂಕು ಕಾಣಿಸಿಕೊಂಡಿದೆ.

53 ಪ್ರಕರಣಗಳ ಪೈಕಿ ಬೆಳಗಾವಿ 22, ಶಿವಮೊಗ್ಗ 8, ಬೆಂಗಳೂರು 3, ಉತ್ತರ ಕನ್ನಡದ ಭಟ್ಕಳದಲ್ಲಿ 7, ಕಲಬುರಗಿ 3, ಬಾಗಲಕೋಟೆ 8, ದಾವಣಗೆರೆ 1, ಚಿಕ್ಕಬಳ್ಳಾಪುರ 1 ಕೇಸ್ ದಾಖಲಾಗಿದೆ. ಬೆಳಗಾವಿಯಲ್ಲಿ ಇಂದು ಅತಿ ಹೆಚ್ಚು ಸೋಂಕು ವರದಿಯಾಗಿದ್ದು, ಇವರೆಲ್ಲರು ರಾಜಸ್ಥಾನದ ಅಜಮೀರ್‌ಗೆ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ದೇಶದಲ್ಲಿ ಸೋಂಕಿತರ ಸಂಖ್ಯೆ 62,939ಕ್ಕೆ ಏರಿಕೆಯಾಗಿದೆ.  ವೈರಸ್’ಗೆ 2,109 ಮಂದಿ ಇದುವರೆಗೆ ಬಲಿಯಾಗಿದ್ದಾರೆ.  ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,277 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 128 ಮಂದಿ ಬಲಿಯಾಗಿದ್ದಾರೆ.  ದೇಶದಲ್ಲೇ ಅತೀ ಹೆಚ್ಚು ಸೋಂಕಿತರು  ಕಂಡು ಬಂದ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್ ನಲ್ಲಿ ಶನಿವಾರವೂ ಹೆಚ್ಚಿನ ಪ್ರ್ಕರಣಗಳು ವರದಿಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!
April 18, 2026
7:28 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ
April 18, 2026
7:22 AM
by: ಮಿರರ್‌ ಡೆಸ್ಕ್
ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್
April 18, 2026
7:07 AM
by: ಮಿರರ್‌ ಡೆಸ್ಕ್
ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ
April 18, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror