ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ: ಅಸ್ತವ್ಯಸ್ತಗೊಂಡ ಜನಜೀವನ

August 7, 2020
3:00 PM

ಮಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಶುಕ್ರವಾರವೂ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜನಜೀವನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ.

ಕಳೆದ ವರ್ಷದಂತೆ ಕರ್ನಾಟಕಕ್ಕೆ ಮತ್ತೆ ಜಲಕಂಟಕ ಎದುರಾಗುವ ಭೀತಿ ಇದೆ. ಕಾರ್ಯಾಚರಣೆಗೆ ಕೂಡಾ ಮಳೆ ಅಡ್ಡಿಯಾಗುತ್ತಿದೆ. ರೈತರು ಬೆಳೆದ ಬೆಳೆಗಳು, ಮನೆಗಳು ಕೊಚ್ಚಿಹೋಗಿವೆ. ರಸ್ತೆಗಳು ಕುಸಿದು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕೆಲವು ಪ್ರದೇಶಗಳು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿವೆ. ಜಿಲ್ಲಾಡಳಿತಕ್ಕೆ ಕಾರ್ಯಾಚಾರಣೆ ನಡೆಸಲು ಮಳೆ ಅಡ್ಡಿಯಾಗಿರುವುದರಿಂದ ಸಂತ್ರಸ್ಥರ ಪರಿಸ್ಥಿತಿ ಶೋಚನೀಯವಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಮಡಿಕೇರಿ, ಹಾಸನ ,ಚಿಕ್ಕಮಗಳೂರು, ಉತ್ತರ ಕನ್ನಡ,  ಶಿವಮೊಗ್ಗ, ಗದಗ, ಧಾರವಾಡ, ಬೆಳಗಾವಿ , ರಾಯಚೂರು ಸೇರಿದಂತೆ ಸುಮಾರು 12 ಕ್ಕೂ ಹೆಚ್ಚು ಜಿಲ್ಲೆಗಳು ಮಹಾಮಳೆಗೆ ಸಿಲುಕಿವೆ. ನದಿಗಳು,ಹಳ್ಳ, ಕೊಳ್ಳಗಳು ಆಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಹಾಮಳೆಗೆ ಈವರೆಗೂ ಒಟ್ಟು 10 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಮನೆ, ಮಠ, ಆಸ್ತಿಪಾಸ್ತಿ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ.

ತುಂಗಭದ್ರ, ಕಾವೇರಿ, ಭದ್ರಾ, ನೇತ್ರಾವತಿ, ಕುಮಾರಧಾರ, ಕೃಷ್ಣ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror