ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆಯಬ್ಬರ | ಕೊಡಗು-ದ ಕ ದಲ್ಲಿ ಧಾರಾಕಾರ ಮಳೆ | ನದಿಗಳಲ್ಲಿ ನೀರಿನ ಮಟ್ಟ ಏರಿಕೆ

July 17, 2020
10:37 PM

ಮಂಗಳೂರು/ಕೊಡಗು: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ  ಶುಕ್ರವಾರ ಧಾರಾಕಾರ ಮಳೆಯಾಗಿದೆ. ಮಳೆಯ ಕಾರಣದಿಂದ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕುಮಾರಧಾರಾ, ನೇತ್ರಾವತಿ ನದಿ ನೀರಿನಮಟ್ಟ ಏರಿಕೆ ಕಂಡುಬಂದರೆ ಕೊಡಗಿನ ಜೀವನದಿ ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಾವೇರಿಯ ಉಗಮಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಗುರುವಾರದಿಂದ ಉತ್ತಮ ಮಳೆಯಾಗುತ್ತಿದ್ದು ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಹೀಗಾಗಿ ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ.  ಇದೇ ವೇಳೆ ಕೊಡಗಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಡಿಕೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಎನ್.ಆರ್ ಪುರ, ಕೊಪ್ಪ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ.ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ಹರಿವಿನ ಮಟ್ಟವೂ ಏಕಾಏಕಿ ಹೆಚ್ಚಳವಾಗಿದೆ. ಎರಡು ದಿನಗಳಿಂದ  ಸುರಿಯುತ್ತಿರುವ ಮಳೆಯಿಂದಾಗಿ ತುಂಗಾ, ಭದ್ರಾ, ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.

ಹೈದರಾಬಾದ್-ಕರ್ನಾಟಕ ಭಾಗದಲ್ಲೂ ಮಳೆ ಸುರಿಯ ತೊಡಗಿದೆ. ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭೀಮಾ ನದಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror