ರಾಜ್ಯದಲ್ಲಿ 18 ಮಂದಿಗೆ ಕೊರೊನಾ ಪಾಸಿಟಿವ್ | ಸೊಂಕಿತರ ಸಂಖ್ಯೆ 463ಕ್ಕೆ ಏರಿಕೆ |

April 24, 2020
2:28 PM

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಮತ್ತೆ 18 ಮಂದಿಯಲ್ಲಿ ಹೊಸದಾಗಿ ಕೊರೊನಾ ವೈರಸ್ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. 18 ಜನರು ಸೋಂಕಿನಿಂದ ಮೃತಪಟ್ಟಿದ್ದು, 150 ಜನರು ಗುಣಮುಖರಾಗಿದ್ದಾರೆ.

ಇಂದು ಬೆಂಗಳೂರು ನಗರದ 11 ಮಂದಿಗೆ ಕೊರೊನಾ ವೈರಸ್ ಪತ್ತೆಯಾಗಿದೆ. ಇದರಲ್ಲಿ ಬೆಂಗಳೂರಿನ ಪಾದರಾಯನಪುರದಲ್ಲಿ ಇತ್ತೀಚಿಗೆ ಗಲಭೆ ನಡೆಸಿದ್ದ 5 ಜನರಲ್ಲಿ ಕೊರೊನಾ ವೈರಸ್  ಸೋಂಕು ದೃಢಪಟ್ಟಿದೆ. ಜೊತೆಗೆ, ಹೊಂಗಸಂದ್ರದ ಬಿಹಾರ ಮೂಲದ ಕಾರ್ಮಿಕನ ಸಂಪರ್ಕದಲ್ಲಿದ್ದ 5 ಜನರಲ್ಲಿ ಸೋಂಕು ಪತ್ತೆಯಾಗಿದೆ.  ಅವರಿಗೆ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗಾವಿ ರಾಯಭಾಗದ 10 ವರ್ಷದ ಬಾಲಕಿ ಹಾಗೂ 15 ವರ್ಷದ ಬಾಲಕ , ಚಿಕ್ಕಬಳ್ಳಾಪುರದ 39 ವರ್ಷದ ವ್ಯಕ್ತಿ, ಬಾಗಲಕೋಟೆ ಮುಧೋಳದ 28 ಹಾಗೂ ಜಮಖಂಡಿಯ 46 ವರ್ಷದ ಗಂಡು, ವಿಜಯಪುರದ 17 ವರ್ಷದ ಯುವಕನಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು ಆರೋಗ್ಯ ಇಲಾಖೆಯ  ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!
June 18, 2026
10:15 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ
June 17, 2026
8:43 PM
by: ದ ರೂರಲ್ ಮಿರರ್.ಕಾಂ
Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ
June 17, 2026
8:21 PM
by: ದ ರೂರಲ್ ಮಿರರ್.ಕಾಂ
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?
June 17, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror