ರಾಜ್ಯದಲ್ಲಿ 9 ಮಂದಿಯಲ್ಲಿ ಮತ್ತೆ ಕೊರೊನಾ ಸೋಂಕು ಪತ್ತೆ | ಸೋಂಕಿತರ ಸಂಖ್ಯೆ 598 ಕ್ಕೆ ಏರಿಕೆ | ದೇಶದಲ್ಲಿ 37,257 ಜನರಿಗೆ ಕೊರೋನಾ ಸೋಂಕು |

May 2, 2020
1:59 PM

ಬೆಂಗಳೂರು: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ಶನಿವಾರ  ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ನಡುವೆ 3 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.

ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ  ಮಾಹಿತಿ ನೀಡಿರುವ ಆರೋಗ್ಯ ಇಲಾಖೆ  ದಾವಣಗೆರೆಯ 69 ವರ್ಷದ ವ್ಯಕ್ತಿ, ಬೀದರ್ ನ 82 ವರ್ಷದ ವ್ಯಕ್ತಿ ಹಾಗೂ ಬೆಂಗಳೂರು ಗ್ರಾಮಂತರಕ್ಕೆ ಸೇರಿದ 63 ವರ್ಷದ ವ್ಯಕ್ತಿ ಮಹಾಮಾರಿಗೆ ಬಲಿಯಾಗಿದ್ದಾರೆಂದು ತಿಳಿಸಿದೆ.

ದೇಶದಾದ್ಯಂತ 37,257 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 1,223 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,007 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು ಮುಂತಾದ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ.

ವಿಶ್ವದಲ್ಲಿ ಅತಿಹೆಚ್ಚು ಕೊರೋನಾ ಸಂಕಷ್ಟಕ್ಕೆ ಈಡಾಗಿರುವ ದೇಶವಾದ ಅಮೆರಿಕದಲ್ಲಿ ಸಾವಿನ ಸಂಖ್ಯೆ 65,776ಕ್ಕೆ ಏರಿಕೆಯಾಗಿದೆ. ಅಮೆರಿಕದಲ್ಲಿ 11.31 ಲಕ್ಷ ಜನರು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ವಿಶ್ವಾದ್ಯಂತ 34.1 ಲಕ್ಷ ಜನರಿಗೆ ಕೊರೋನಾ ಸೋಂಕು ತಗುಲಿದ್ದು, 2.39 ಲಕ್ಷ ಜನರು ಸಾವನ್ನಪ್ಪಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror