ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಪುತ್ತೂರು

June 17, 2019
12:00 PM

ಪುತ್ತೂರು: ಕಳೆದ ಎರಡು ಮೂರು ವರುಷಗಳಿಂದ ಮಂಗಳೂರು ರಾಮಕೃಷ್ಣ ಮಿಷನ್ ವತಿಯಿಂದ ಪುತ್ತೂರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನವು ಈ ಬಾರಿ ಜೈನಭವನದ ಆಸುಪಾಸಿನಲ್ಲಿ ಮತ್ತು ಬೈಪಾಸ್ ರಸ್ತೆಯ ಕೆಲವು ಪ್ರದೇಶಗಳಲ್ಲಿ ನಡೆಯಿತು.

Advertisement

ಕಾರ್ಯಕ್ರಮವನ್ನು ರೋಟರಿ ಕ್ಲಬ್ ನ ಎ.ಜೆ ರೈ ಮತ್ತು ನಗರಸಭಾ ಸದಸ್ಯೆ ಗೌರಿ ಬನ್ನೂರು ಅವರು ಜಂಟಿಯಾಗಿ ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿದರು. ಸುಮಾರು 50 ಜನ ಭಾಗವಹಿಸಿದ ಈ ಕಾರ್ಯಕ್ರಮವು ಮಳೆಗಾಲದಲ್ಲಿ ಕೂಡ ನಡೆಯುತ್ತಿರುವುದು ಶ್ಲಾಘನೀಯ ಎಂದು ಎ.ಜೆ ರೈ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಗೌರಿ ಬನ್ನೂರು ಅವರು ಮಾತನಾಡಿ “ಪ್ರಧಾನಿಯವರ ಈ ಯೋಜನೆಯು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆಯುತ್ತಿದ್ದು ಸಾಕಷ್ಟು ಜನ ಜಾಗೃತರಾಗಿದ್ದಾರೆ” ಎಂದರು.ನಂತರ ಮಳೆಗಾಲದಲ್ಲಿ ಅವಶ್ಯವಾಗಿ ಬೇಕಾಗಿರುವ ರಸ್ತೆ ಬದಿಯ ಕಾಲುವೆಯನ್ನು ಸರಿಪಡಿಸಲಾಯಿತು.ವಾಹನ ಸವಾರರಿಗೆ ಅಡ್ಡಿಯಾಗುತ್ತಿದ್ದ ಪೊದೆಗಳನ್ನು ಕಡಿಯಲಾಯಿತು.

ಸ್ವಚ್ಛತಾ ಕಾರ್ಯದ ಕೊನೆಯಲ್ಲಿ ಚಹಾ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿತ್ತು.ಧನ್ಯಕುಮಾರ್ ಬೆಳಂದೂರು ಅವರು ಟಿಪ್ಪರ್ ವ್ಯವಸ್ಥೆಯನ್ನು ಮಾಡಿದ್ದರು.’ಟೀಮ್ ನರೇಂದ್ರ’ದ ಸಂಚಾಲಕ ಸಂತೋಷ್ ಕುಮಾರ್ ವಾಗ್ಲೆ,ವಕೀಲರ ಸಂಘದ ಉಪಾಧ್ಯಕ್ಷ ಸುರೇಶ್ ರೈ ಪಡ್ಡಂಬೈಲು,ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಮೂಲ್ಯ,ರಾಜ್ಯಪ್ರಶಸ್ತಿ ವಿಜೇತರಾದ ಸುರೇಶ್ ಶ್ರೀಶಾಂತಿ,ನಗರಸಭಾ ಸದಸ್ಯರಾದ ಪಿ.ಜಿ ಜಗನ್ನಿವಾಸ್ ರಾವ್ ಮತ್ತು ಶಿವರಾಮ ಸಫಲ್ಯ ಮೊದಲಾದವರು ಕಸ ವಿಲೇವಾರಿಯಲ್ಲಿ ತೊಡಗಿಸಿಕೊಂಡಿದ್ದರು.

ರಾಮಕೃಷ್ಣ ಮಿಷನ್ ನ ಕಾರ್ಯಕರ್ತ ಶ್ರೀಕೃಷ್ಣ ಉಪಾಧ್ಯಾಯ ಮತ್ತು ದಿನೇಶ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಸಂಘಟಿಸಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ
July 19, 2025
8:48 PM
by: ದ ರೂರಲ್ ಮಿರರ್.ಕಾಂ
ನಿಧನ | ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್
July 19, 2025
4:29 PM
by: The Rural Mirror ಸುದ್ದಿಜಾಲ
ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ
July 17, 2025
9:46 PM
by: The Rural Mirror ಸುದ್ದಿಜಾಲ
ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಬಾಧೆ
July 17, 2025
9:02 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group