ಲಾಕ್ಡೌನ್ ಸಡಿಲಿಕೆ | ದಕ ಜಿಲ್ಲೆಯಲ್ಲಿ ಗುರುವಾರ ಬಳಿಕ ನಿರ್ಧಾರ | ಜಿಲ್ಲೆಯಲ್ಲಿ ಹಲವು ಕಂಟೈನ್ಮೆಂಟ್ ಪ್ರದೇಶ ಇರುವುದರಿಂದ ಎಚ್ಚರಿಕೆ ಅಗತ್ಯ |

April 22, 2020
10:02 PM

ಮಂಗಳೂರು:  ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸಡಿಲಿಕೆ ಮಾಡುವ ಬಗ್ಗೆ ಸಭೆ ನಡೆಸಿ ಜಿಲ್ಲೆಯ ಸ್ಥಿತಿಗತಿ ಗಮನಿಸಿದ ಬಳಿಕವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾಟ್ ಸ್ಫಾಟ್ ಅಥವಾ ರೆಡ್ ಝೋನ್ ವಲಯದಲ್ಲಿ ಇರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಸ್ತುಸ್ಥಿತಿ ತಿಳಿಯಬೇಕಿದೆ.ಇಲ್ಲಿ ಈಗಾಗಲೇ ಕಂಟೈನ್ಮೆಂಟ್ ವಲಯ ಮಾಡಲಾಗಿದೆ ಇದೆಲ್ಲಾ ಗಮನಿಸಿದ ಬಳಿಕವೇ ಕ್ರಮ ಕೈಗೊಳ್ಳಲಾಗುತ್ತದೆ , ಹೀಗಾಗಿ ಎ.23 ರಂದು ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗುವುದು. ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.  ಜಿಲ್ಲಾಡಳಿತವು ಲಾಕ್ಡೌನ್ ಸಡಿಲಿಕೆ ನಿಯಮದ ಬಗ್ಗೆ ಅಧಿಕೃತ ಆದೇಶ ಹೊರಡಿಸದ ಹೊರತು ಲಾಕ್ಡೌನ್ ಉಲ್ಲಂಘನೆ ಮಾಡುವಂತಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror