ಸುಳ್ಯ: ಕೇರ್ಪಳದ ಪಯಸ್ವಿನಿ ಯುವಕ ಮಂಡಲ, ನಗರ ಪಂಚಾಯತ್ ಸುಳ್ಯ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ತೇಜಸ್ವಿನಿ ಮಹಿಳಾ ಮಂಡಲ ಕೇರ್ಪಳ ಇದರ ಸಹಯೋಗದಲ್ಲಿ ವನಮಹೋತ್ಸವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಕುರುಂಜಿಭಾಗ್‌ನಲ್ಲಿ ನಡೆಯಿತು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮದ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನ.ಪಂ. ಸದಸ್ಯರುಗಳಾದ ವಿನಯಕುಮಾರ್ ಕಂದಡ್ಕ, ಪೂಜಿತಾ ಕೆ.ಯು., ಸುಧಾಕರ ಕುರುಂಜಿಭಾಗ್, ವರ್ತಕರ ಸಂಘಸ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ ಪೆರಾಜೆ, ಉಪಾಧ್ಯಕ್ಷ ಪ್ರವೀಣ್‌ಕುಮಾರ್, ದಯಾನಂದ ಕೇರ್ಪಳ, ನ.ಪಂ. ಮುಖ್ಯಾಧಿಕಾರಿ ಮತ್ತಡಿ, ವಿನೋದ್ ಲಸ್ರಾದೋ, ಗೋಪಾಲ್ ನಡುಬೈಲು ಮೊದಲಾದವರಿದ್ದರು. ಚಂದ್ರಶೇಖರ ಕೇರ್ಪಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel