ಬೆಂಗಳೂರು : ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ನಾಡಿನ ಸಮಸ್ತ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.
ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಜಗನ್ಮಾತೆಯು ಎಲ್ಲರಿಗೂ ಸುಖ, ಸಂತೋಷ, ಸಮೃದ್ಧಿಗಳನ್ನು ಕರುಣಿಸಲಿ, ಎಲ್ಲ ಸಂಕಷ್ಟಗಳನ್ನು ಪರಿಹರಿಸಲಿ ಎಂದು ಪ್ರಾರ್ಥಿಸುತ್ತೇನೆ. ಕೊರೋನಾ ಹಿನ್ನಲೆಯಲ್ಲಿ ಮನೆಗಳಲ್ಲಿಯೇ ಸರಳವಾಗಿ ಹಬ್ಬವನ್ನು ಆಚರಿಸೋಣ, ಮುನ್ನೆಚ್ಚರಿಕೆಗಳನ್ನು, ಸುರಕ್ಷತಾ ನಿಯಮಗಳನ್ನು ಪಾಲಿಸೋಣ ಎಂದು ಮನವಿ ಮಾಡಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel